ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಅಭ್ಯರ್ಥಿಗಳು ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಈ ಬೆನ್ನಲ್ಲೇ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂಎಲ್‌ಸಿ ಎಚ್.ವಿಶ್ವನಾಥ್ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟವಾಗುವುದು ಗ್ಯಾರಂಟಿ. ಏಕೆಂದರೆ ಈಗಾಗಲೇ ಕಾಂಗ್ರೆಸ್ ಮೇಲೆ ಮುಡಾ ಮತ್ತು ವಾಲ್ಮೀಕಿ ಹಗರಣಗಳ ಕಾರ್ಮೋಡ ಕವಿದಿದೆ. ಹೀಗಾಗಿ ಚನ್ನಪಟ್ಟಣದಲ್ಲಿ ಜೆಡಿಎಸ್‌ಗೆ ಗೆಲುವಿನ ವಾತಾವರಣವಿದೆ. ಅಲ್ಲದೇ, ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದು, ಮೆಗಾಸಿಟಿ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದಾರೆ. ಈ ವಂಚನೆಗೊಳಗಾಗಿದವರಲ್ಲಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಕಾರಣಕ್ಕೆ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…