ಮೈಸೂರು: ನಿನ್ನೆ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಯಾವುದೇ ವಿರೋಧ ತೋರದಂತೆ ನಡೆದುಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾನು ಮುಷ್ತಾಕ್ ಅವರ ಮಂಡ್ಯ ಹೇಳಿಕೆಗೆ ಮಾತ್ರ ನಮ್ಮ ವಿರೋಧ ಇತ್ತು. ನಿನ್ನೆ ದಸರಾ ಉದ್ಘಾಟನೆಯಲ್ಲಿ ಯಾವ ರೀತಿ ನೆಡೆದುಕೊಳ್ಳುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೆವು. ಬಾನು ಮುಷ್ತಾಕ್ ನಮ್ಮ ಸಂಪ್ರದಾಯದ ರೀತಿ ದಸರಾ ಉದ್ಘಾಟನೆ ಮಾಡಿದ್ದಾರೆ. ಬಾನು ಮುಷ್ತಾಕ್ ಅವರನ್ನು ವೈಯಕ್ತಿಕವಾಗಿ ಅಥವಾ ಅವರ ಧರ್ಮವನ್ನು ವಿರೋಧ ಮಾಡಿಲ್ಲ. ಅವರ ಮಂಡ್ಯ ಹೇಳಿಕೆಗೆ ಮಾತ್ರ ವಿರೋಧ ವ್ಯಕ್ತಪಡಿಸಿದ್ದೆವು. ನಿನ್ನೆ ಯಾವುದೇ ವಿರೋಧ ತೋರದಂತೆ ನಡೆದುಕೊಂಡಿದ್ದಾರೆ ಎಂದು ಹೇಳಿದರು.
ಇದನ್ನು ಓದಿ: Mysuru Dasara | ದೀಪಾಲಂಕಾರ ಕಣ್ತುಂಬಿಕೊಂಡ ಜನಸಾಗರ
ಇನ್ನು ನಿನ್ನೆಯ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಗುರಿಯಾಗಿಸಿಕೊಂಡು ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 10 ದಿನಗಳ ನಾಡಹಬ್ಬದಲ್ಲಿ ರಾಜಕೀಯ ಹೊರತುಪಡಿಸಿ ದಸರಾ ಮಾಡಲಿ ಎನ್ನುವುದು ನನ್ನ ಆಶಯ. ಇದರ ಬಗ್ಗೆ ನಾನು ಹೆಚ್ಚು ಕಮೆಂಟ್ ಮಾಡುವುದಿಲ್ಲ.
ದಸರಾ ಮುಗಿದ ಬಳಿಕ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…