ಮೈಸೂರು ನಗರ

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಎನ್‌ಐಸಿಯುನಲ್ಲಿ ನವಜಾತ ಶಿಶುವಿಗೆ ಇರುವೆ ಕಚ್ಚಿ ಮೃತಪಟ್ಟ ವಿಚಾರ ದೊಡ್ಡ ಸದ್ದು ಮಾಡಿರುವ ಜೊತೆಗೆ, ಕಳೆದ 15 ತಿಂಗಳ ಅವಧಿಯಲ್ಲಿ 421 ಶಿಶುಗಳು, 12 ತಾಯಂದಿರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ನವಜಾತ ಶಿಶುಗಳ ಮರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ನಿರಂತರವಾಗಿ ಒತ್ತಡ ಹೇರುತ್ತಿರುವ ಸಂದರ್ಭದಲ್ಲೇ ಮಾಜಿ ಶಾಸಕ ಎಲ್.ನಾಗೇಂದ್ರ ಹೊರ ಹಾಕಿರುವ ದಾಖಲೆ ಪೋಷಕರಲ್ಲಿ ದೊಡ್ಡ ಆತಂಕ ಮೂಡಿಸಿದೆ.

ತಾಯಿ ಮತ್ತು ಮಗುವಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದು, ಹೆರಿಗೆ ಸಂದರ್ಭ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ತಗ್ಗಿಸುವ ಸಲುವಾಗಿ 1880 ರಲ್ಲಿ ಮೈಸೂರು ಅರಸರು ನಿರ್ಮಾಣ ಮಾಡಿದ ಚೆಲುವಾಂಬ ಆಸ್ಪತ್ರೆ ಸುತ್ತಲಿನ ಐದಾರು ಜಿಲ್ಲೆಗಳ ಜನರಿಗೆ ಆರೋಗ್ಯ ಸೇವೆ ನೀಡುತ್ತಾ ಬಂದಿದೆ. ಈ ನಡುವೆ ವೈದ್ಯಕೀಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕೊರತೆ, ಹೊರ ಜಿಲ್ಲೆ ರೋಗಿಗಳ ಒತ್ತಡ ಸೇರಿದಂತೆ ಹತ್ತಾರು ಕಾರಣಗಳಿಂದ 2025ರ ಜನವರಿಯಿಂದ ಈವರೆಗೆ ಆಸ್ಪತ್ರೆಯಲ್ಲಿ 421 ನವಜಾತ ಶಿಶುಗಳು ಅಸುನೀಗಿದ್ದು, 12 ತಾಯಂದಿರು ಮೃತಪಟ್ಟಿರುವ ಸಂಗತಿ ಬೆಳಕಿಗೆ ಬಂದಿದ್ದು, ಈ ಪ್ರಕರಣ ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ.

ಇಡೀ ರಾಜ್ಯಕ್ಕೆ ಹೋಲಿಕೆ ಮಾಡಿದರೆ ಮೈಸೂರು ಜಿಲ್ಲೆ ಶಿಶು ಮರಣ ಪ್ರಮಾಣದಲ್ಲಿ ಕಡಿಮೆ ಇದೆ. ಆದರೂ ಆಸ್ಪತ್ರೆಯ ಎಸ್‌ಎನ್‌ಸಿಯು(ಸಿಕ್ ನ್ಯೂಬಾರ್ನ್ ಕೇರ್ ಯುನಿಟ್)ಗೆ ದಾಖಲಾದ 3,486 ಶಿಶುಗಳ ಪೈಕಿ 421 ಶಿಶುಗಳು ಮರಣಹೊಂದಿವೆ. ಈ ಪ್ರಮಾಣದಲ್ಲಿ ಶಿಶುಗಳ ಮರಣ ನಿರಂತರವಾಗಿ ಸಂಭವಿಸುತ್ತಿದ್ದರೂ ಅದನ್ನು ತಡೆಯುವಲ್ಲಿ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಜಿಲ್ಲಾಡಳಿತ ವಿಫಲವಾಗಿರುವುದು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.

 

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

19 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

19 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

19 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

20 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

21 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

1 day ago