ಮೈಸೂರು: ಚೆಕ್‌ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣಗೆ ಸಂಕಷ್ಟ ಎದುರಾಗಿದ್ದು, ಮೈಸೂರು ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಇಂದು ನಡೆದ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಾಮೀನು ರಹಿತ ಬಂಧನಕ್ಕೆ ಆದೇಶಿಸಿದೆ.
ಎನ್.ಕುಮಾರ್ ಎಂಬುವವರು ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್‌ಬೌನ್ಸ್ ಪ್ರಕರಣ ದಾಖಲಿಸಿದ್ದರು. ಇಂದು ವಿಚಾರಣೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಇಂದಿನ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಗೈರು ಹಾಜರಾದ ಪರಿಣಾಮ ನ್ಯಾಯಾಲಯವು ಜಾಮೀನು ರಹಿತ ಬಂಧನ ಆದೇಶ ಹೊರಡಿಸಿದೆ.