Mysore
29
overcast clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಘಟನೆಯ ಸತ್ಯಾಸತ್ಯತೆ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿರುವುದಿಂದ ಮಗುವಿನ ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಮಗುವಿನ ಪೋಷಕರು ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂದು ಗಂಭೀರ ಆರೋಪ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗೆ ವೈದ್ಯಾಧಿಕಾರಿಗಳು ನಿರ್ಧಾರ ಮಾಡಿದ್ದು, ಪೋಷಕರು ಆರೋಪಿಸುವ ರೀತಿ ಒಂದು ವೇಳೆ ಇರುವೆ ಕಚ್ಚಿದ್ದರೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ ಎಂಬ ಹೇಳಲಾಗುತ್ತಿದೆ.

ಸದ್ಯ ಪೋಷಕರು ಮಗುವಿನ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ನಾಳೆ (ಏಪ್ರಿಲ್.‌24, 2026) ಮಗುವಿನ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

 

Tags:
error: Content is protected !!