ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಸಿಯುನ ಉಸ್ತುವಾರಿ ವೈದ್ಯರು ಸೇರಿದಂತೆ ಏಳು ಮಂದಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಲಾಗಿದೆ.
ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಎನ್ಐಸಿಯುನಲ್ಲಿ ರಮಾಬಾಯಿನಗರದ ಸಿದ್ಧಾರ್ಥ ಎಂಬವರ ನವಜಾತ ಶಿಶು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ಇರುವೆ ಕಚ್ಚಿ ಮಗು ಸಾವನ್ನಪ್ಪಿದೆ ಎನ್ನುವ ಆರೋಪ ಮಾಡಿ ಪ್ರತಿಭಟನೆ ನಡೆಸಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ವೈದ್ಯಕೀಯ ಅಧಿಕ್ಷಕ ಲಕ್ಷ್ಮೀಕಾಂತ್ ಅವರು ಏಳು ಮಂದಿಗೆ 48 ಗಂಟೆಯೊಳಗೆ ಸೂಕ್ತ ಉತ್ತರ ನೀಡುವಂತೆ ನೋಟಿಸ್ ನೀಡಿದ್ದಾರೆ.
ಎನ್‌ಐಸಿಯುನ ಕರ್ತವ್ಯನಿರತ ವೈದ್ಯರು, ವಾರ್ಡ್ ಇನ್ ಚಾರ್ಜ್ ವೈದ್ಯರು, ಶುಶ್ರೂಷಕಿ, ಸ್ವಚ್ಛತಾ ಸಿಬ್ಬಂದಿ ಅಲ್ಲದೆ, ಮೃತ ಮಗುವನ್ನು ಹಸ್ತಾಂತರ ಮಾಡುವಾಗ ಉಡಾಫೆಯಿಂದ ವರ್ತಿಸಿದ ನರ್ಸ್, ಸಿಬ್ಬಂದಿಗೂ ನೋಟಿಸ್ ನೀಡಲಾಗಿದೆ.
ಮಗುವಿನ ಪೋಷಕರು ಮಾಡಿರುವ ಆರೋಪಗಳನ್ನು ಉಲ್ಲೇಖಿಸಿ ನೋಟಿಸ್ ಕೊಡಲಾಗಿದ್ದು, 48 ಗಂಟೆಯೊಳಗೆ ಉತ್ತರ ಕೊಡಬೇಕು. ತಪ್ಪಿದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಹೇಳಲಾಗಿದೆ. ಮಗುವಿನ ಮರಣೋತ್ತರ ಪರೀಕ್ಷೆಯನ್ನು ಗುರುವಾರ ಪೋಷಕರ ಸಮ್ಮುಖದಲ್ಲಿ ನಡೆಸಲಾಗಿದ್ದು, ಇರುವೆ ಕಚ್ಚಿದ್ದರಿಂದಲೇ ಮೃತಪಟ್ಟಿದೆಯೇ ಎಂಬುದರ ಬಗ್ಗೆ ವರದಿ ಪಡೆಯಲು ಮಧ್ಯಪ್ರದೇಶದ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಸಂದರ್ಭದಲ್ಲಿ ಪೊಲೀಸರು ತಾಯಿ, ತಂದೆ ಹಾಗೂ ಪೋಷಕರಿಂದ ಹೇಳಿಕೆಯನ್ನು ಪಡೆದುಕೊಂಡರು. ಆಸ್ಪತ್ರೆಗೆ ದಾಖಲಾದ ದಿನದಿಂದ ಮಗು ಸಾವಿನ ಖಚಿತಪಡಿಸುವ ತನಕ ನಡೆದಿರುವ ಎಲ್ಲ ದಿನಗಳ ದಿನಚರಿ ಕುರಿತಂತೆ ಮಾಹಿತಿ ಪಡೆದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…