ಮೈಸೂರು: ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಮಗು ಇರುವೆ ಕಚ್ಚಿ ಸಾವನ್ನಪ್ಪಿದೆ ಎಂಬ ಆರೋಪ ಕೇಳಿಬಂದಿದೆ.
ಏಪ್ರಿಲ್.15ರಂದು ಅವಧಿ ಪೂರ್ವ ಜನನವಾಗಿದ್ದ ಗಂಡು ಮಗು ಇಂದು ಇರುವೆ ಕಚ್ಚಿ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ.
ಕೇವಲ 7 ತಿಂಗಳಿಗೆ ಹುಟ್ಟಿದ್ದ ಮಗು 1 ಕೆಜಿ 40 ಗ್ರಾಂ ಮಾತ್ರ ಇತ್ತು. ಈ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಮಗುವಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಚಿಕಿತ್ಸೆ ವೇಳೆ ಮಗುವಿಗೆ ಇರುವೆ ಕಚ್ಚಿರುವ ಆರೋಪ ಕೇಳಿಬಂದಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಮಗುವಿನ ಪೋಷಕರು ವೈದ್ಯರ ಮೇಲೆ ಗಂಭೀರ ಆರೋಪ ಮಾಡಿದ್ದು, ಇರುವೆಗಳಿವೆ ಎಂದು ಸಿಬ್ಬಂದಿಗೆ ತಿಳಿಸಿದ್ದೆವು. ತುಂಬಾ ಇರುವೆಗಳಿದ್ದವು, ಈ ಬಗ್ಗೆ ಗಮನಕ್ಕೆ ತಂದಾಗ ಸಿಹಿ ಕಾರಣಕ್ಕೆ ಒಂದೆರೆಡು ಇವೆ ಎಂದು ಸಮಾಜಾಯಿಸಿ ನೀಡಿದ್ರು. ಈಗ ನೋಡಿದ್ರೆ ಮಗುವೇ ತೀರಿಕೊಂಡಿದೆ ಎಂದು ಹೇಳುತ್ತಿದ್ದಾರೆ. ನಮಗೆ ನ್ಯಾಯ ಬೇಕು ಎಂದು ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.





