ಮೈಸೂರು : ನಗರದಾದ್ಯಂತ ಶನಿವಾರ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಸರಳವಾಗಿ ಸಂಭ್ರಮದಿಂದ ಆಚರಿಸಲಾಯಿತು.
ನಗರದ ಇಸ್ಕಾನ್ ಟೆಂಪಲ್, ವೇಣುಗೋಪಾಲಸ್ವಾಮಿ ದೇವಾಲಯ ಸೇರಿದಂತೆ ಶ್ರೀಕೃಷ್ಣ ದೇಗುಲಗಳ್ಲಲಿ ವಿಶೇಷ ಪೂಜೆಗಳು ನೆರವೇರಿದವು. ಹಿಂದೂಗಳು ತಮ್ಮ ತಮ್ಮ ಮನೆಗಳಲ್ಲಿ ಸರಳವಾಗಿ ಅಷ್ಟಮಿ ಆಚರಣೆ ಮಾಡಿದರು.
ಮನೆಯಲ್ಲಿರುವ ಪುಟ್ಟ ಮಕ್ಕಳಿಗೆ ಕೃಷ್ಣ, ರಾಧೆಯ ವೇಷಭೂಷಣ ತೊಡಿಸಿ ಪೋಷಕರು ಸಂಭ್ರಮಿಸಿದರು. ಕೃಷ್ಣನ ವಿಗ್ರಹಗಳಿಗೆ ಪೂಜೆ ಸಲ್ಲಿಸಿ, ವಿವಿಧ ರೀತಿಯ ಚಕ್ಕುಲಿ, ಕೋಡುಬಳೆ ಮುಂತಾದ ತಿಂಡಿ, ಭಕ್ಷ್ಯಗಳನ್ನು ತಯಾರಿಸಿ ನೈವೇದ್ಯ ಮಾಡಿದರು. ಮಧ್ಯಾಹ್ನ ಸಿಹಿಯೂಟ ಸವಿದರು.
ನಗರದ ಯಾದವಗಿರಿಯಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಕೂರ್ಗಳ್ಳಿಯಲ್ಲಿರುವ ವಾಸವಿ ಕಾನ್ವೆಂಟ್‌ಶಾಲೆ, ರೂಪನಗರದ ದೀಪಾ ಕಾನ್ವೆಂಟ್ ಸೇರಿದಂತೆ ನಗರದ ಅನೇಕ ಕಾನ್ವೆಂಟ್ ಗಳಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…