ಮೈಸೂರು ನಗರ

ಮೈಸೂರು| ಮರ ಕಡಿದ ಜಾಗದಲ್ಲಿ ಮಕ್ಕಳಿಂದ ಅಭಿಯಾನ

ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಿರುವ ಪ್ರಕರಣ ಇದೀಗ ತೀವ್ರ ಕಾವು ಪಡೆದುಕೊಂಡಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

ವಿಶ್ವ ಭೂ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮರಗಳನ್ನು ಕಡಿದ ಜಾಗದಲ್ಲೇ ಮಕ್ಕಳು ಅಭಿಯಾನ ನಡೆಸಿದ್ದಾರೆ. ನಾವು ಮಕ್ಕಳು, ಮುಂದಿನ ಪ್ರಜೆಗಳು ಆದ್ದರಿಂದ ನಮಗೊಂದಿಷ್ಟು ಮರಗಳನ್ನು ಉಳಿಸಿ ಎಂದು ಅಭಿಯಾನ ನಡೆಸಿದ್ದು, ಮರವಿಲ್ಲದೇ ನರನಿರಬಲ್ಲನೇ ಎಂಬ ಶೀರ್ಪಿಕೆಯಡಿ ಜನಜಾಗೃತಿ ಮೂಡಿಸಿದರು.

ನಗರದ ಹೈದರಾಲಿ ರಸ್ತೆಯಲ್ಲೇ ಶಾಮಿಯಾನ ಹಾಕಿ ಜನಜಾಗೃತಿ ಮೂಡಿಸಿದ ಮಕ್ಕಳು ಇನ್ನು ಮುಂದೆ ಯಾವುದೇ ಕಾರಣಕ್ಕೂ ಮರಗಳನ್ನು ಕಡಿಯಬೇಡಿ ಎಂದು ಮನವಿ ಮಾಡಿದರು. ಇದೇ ವೇಳೆ ಪರಿಸರ ಜಾಗೃತಿ ಕುರಿತು ಗೀತ ಗಾಯನ ಪ್ರಸ್ತುತಪಡಿಸಿದರು.

ಜಾಗೃತಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪರಿಸರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಡಾ.ಟಿ.ಎಸ್ ಹರ್ಷ ಅವರು ಮರವಿಲ್ಲದೆ ನರನಿರಬಲ್ಲನೆ ಎಂಬ ವಿಚಾರ ಕುರಿತು ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಮೈಸೂರಿನ ಪರಿಸರವಾದಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರು ಸೇರಿದಂತೆ ನೂರಾರು ಜನರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

16 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

16 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

23 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

23 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

23 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

23 hours ago