ಮೈಸೂರು ನಗರ

ಕುಕ್ಕರಹಳ್ಳಿ ಕೆರೆಯಲ್ಲಿ ಸ್ಚಚ್ಛತಾ ಅಭಿಯಾನ : 410 ಕೆ.ಜಿ ಕಸ ಸಂಗ್ರಹ

ಮೈಸೂರು : ಸ್ವಚ್ಛ ನಗರಿ ಮೈಸೂರಿನ ರಮಣೀಯ ಸ್ಥಳವಾದ ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗಾಗಿ, ಸ್ವಚ್ಛ ಸರ್ವೇಕ್ಷಣ ಅಭಿಯಾನದ ಭಾಗವಾಗಿ ಮೈಸೂರು ನಗರ ಪಾಲಿಕೆ ವತಿಯಿಂದ ಕುಕ್ಕರಹಳ್ಳಿ ಕೆರೆಯಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಶಾಲಾ ಮಕ್ಕಳಿಗಾಗಿ ಪರಿಸರ ಸಂರಕ್ಷಣೆಯ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.

ನಗರದ ವಿವಿಧ ಶಾಲಾ-ಕಾಲೇಜುಗಳು, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಮೈಸೂರು, ಎಸ್‌ಜೆಸಿಇ ಕಾಲೇಜು, ಎಂಐಟಿ ಕಾಲೇಜು, ಯುವರಾಜ ಕಾಲೇಜಿನ ಎನ್‌ಎಸ್‌ಎಸ್ ಮತ್ತು ಎನ್‌ಸಿಸಿ ವಿದ್ಯಾರ್ಥಿಗಳು ಹಾಗೂ ಮೈಸೂರು ಗ್ರಾಹಕ ಪರಿಷತ್, ಕ್ಲೀನ್ ಮೈಸೂರು ಫೌಂಡೇಷನ್ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದ ಸ್ವಯಂ ಸೇವಕರಿಂದ ಕುಕ್ಕರಹಳ್ಳಿ ಕೆರೆ ಸುತ್ತಲು ತ್ಯಾಜ್ಯ ಸಂಗ್ರಹಣೆ ಹಾಗೂ ಸ್ವಚ್ಛತಾ ಕಾರ್ಯ ನಡೆಯಿತು. ಅಭಿಯಾನದಲ್ಲಿ 1,000ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸ್ವಯಂ ಸೇವರಕರು ಭಾಗವಹಿಸಿದ್ದರು.

ಸ್ವಚ್ಛತಾ ಅಭಿಯಾನದಲ್ಲಿ ಒಟ್ಟು 410 ಕೆಜಿ ತ್ಯಾಜ್ಯವನ್ನು ಸಂಗ್ರಹಿಸಲಾಯಿತು. ಅಲ್ಲದೇ, ಕಸ ಹಾಗೂ ತ್ಯಾಜ್ಯವನ್ನು ಬೀಸಾಡದಂತೆ, ಪರಿಸರ ಸಂರಕ್ಷಣೆ, ಸ್ವಚ್ಛತೆ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಶಾಲಾ ಮಕ್ಕಳಿಗೆ ಆಯೋಜಿಸಿದ್ದ ಚಿತ್ರಕಲೆ ಸ್ಪರ್ಧೆಯಲ್ಲಿ ಕೆ.ಪಿ.ಕಾನ್ವೆಂಟ್, ಸೇಂಟ್ ಪಾಲ್ ಶಾಲೆ, ಲಿಟಲ್ ಇನ್ಛೆಂಟ್ ಶಾಲೆ, ಅಮೃತ್ ವಿದ್ಯಾಲಯ, ವಿದ್ಯಾವರ್ಧಕ ಮತ್ತು ಪ್ರಗತಿ ವಿದ್ಯಾಲಯದ ಶಾಲಾ ಮಕ್ಕಳು 200ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಬಳಿಕ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಮೈಸೂರು ನಗರ ಪಾಲಿಕೆಯ ಸ್ವಚ್ಛ ಭಾರತ ಮಿಷನ್ ನೋಡೆಲ್ ಅಧಿಕಾರಿ ಕೆ.ಎಸ್.ಮೃತ್ಯುಂಜಯ, ಸಹಾಯಕ ಕಾರ್ಯನಿರ್ವಹಣಾ ಇಂಜಿನಿಯರ್ ಮೀನಾಕ್ಷಿ, ಕ್ಲೀನ್ ಮೈಸೂರು -ಂಡೇಷನ್‌ನ ಲೀಲಾ ವೆಂಕಟೇಶ್, ಪಾಲಿಕೆಯ ಎಲ್ಲ ಪರಿಸರ ಇಂಜಿನಿಯರ್‌ಗಳು, ಆರೋಗ್ಯ ನಿರೀಕ್ಷಕರು, ಮೇಲ್ವಿಚಾರಕರು ಮತ್ತು ಪೌರಕಾರ್ಮಿಕರು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

2 hours ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

2 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

2 hours ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

2 hours ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

2 hours ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

2 hours ago