ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಶಾಸಕ ಕೆ.ಹರೀಶ್ ಗೌಡ ಹಾಗೂ ಅಭಿಮಾನಿಗಳ ವತಿಯಿಂದ ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಹೊಸ ಬಟ್ಟೆ ವಿತರಣೆ ಮಾಡಲಾಯಿತು.
ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಬಟ್ಟೆ ವಿತರಿಸುವ ಮೂಲಕ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಿಸಿದ ಹರೀಶ್ ಗೌಡ ಹಾಗೂ ಅಭಿಮಾನಿಗಳು, ಮಾವುತರು ಹಾಗೂ ಕಾವಾಡಿಗರಿಗೆ ಬೆಳಗಿನ ಉಪಹಾರ ವಿತರಿಸಿ ಖುಷಿಪಟ್ಟರು.
ಕಾರ್ಯಕ್ರಮದಲ್ಲಿ ಡಿಸಿಎಫ್ ಪ್ರಭುಗೌಡ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಭಾಗಿಯಾಗಿದ್ದರು.





