ಮೈಸೂರು ನಗರ

ಸಿಎಂ, ಡಿಸಿಎಂ ಇಬ್ಬರು ಸೇರಿ ಬಾನು ಮುಷ್ತಾಕ್‌ರಿಂದ ಕನ್ನಡಿಗರಿಗೆ ಕ್ಷಮೆ ಕೇಳಿಸಲಿ: ಪ್ರತಾಪ್‌ ಸಿಂಹ

ಮೈಸೂರು: ಕನ್ನಡಾಂಬೆ ಬಗ್ಗೆ ಬಾನು ಮುಷ್ತಾಕ್ ಹೇಳಿರುವ ಹೇಳಿಕೆ ಬಗ್ಗೆ ನಮ್ಮ ತಕಾರರು ಇದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ.

ಬಾನು ಮುಷ್ತಾಕ್ ದಸರಾ ಉದ್ಘಾಟನೆ ಆಯ್ಕೆ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ಅವರು, ಬಾನು ಮುಷ್ತಾಕ್ ಸಾಧನೆ ಬಗ್ಗೆ ನನಗೆ ಗೌರವವಿದೆ. 100% ದಸರಾ ಧಾರ್ಮಿಕ ಆಚರಣೆ, ನಮ್ಮ ಧಾರ್ಮಿಕ ಆಚರಣೆ ಬಗ್ಗೆ ಬಾನು ಮುಷ್ತಾಕ್‌ಗೆ ಅಸಮಾಧಾನಗಳಿವೆ. ಬಾನು ಮುಷ್ತಾಕ್ ಮುಸ್ಲಿಂ ಎನ್ನುವ ಕಾರಣಕ್ಕೆ ನನ್ನ ವಿರೋಧವಿಲ್ಲ. ಕನ್ನಡಾಂಬೆ ಬಗ್ಗೆ ಬಾನು ಮುಷ್ತಾಕ್ ಹೇಳಿರುವ ಹೇಳಿಕೆ ಬಗ್ಗೆ ನಮ್ಮ ತಕಾರರು ಇದೆ ಹಿಂದೂ ಸಂಸ್ಕಾರಗಳ ಬಗ್ಗೆ ಬಾನು ಮುಷ್ತಾಕ್‌ಗೆ ಒಪ್ಪಿಗೆ ಇಲ್ಲ. ಕನ್ನಡಾಂಬೆ ಬಗ್ಗೆ ಬಾನು ಮುಷ್ತಾಕ್ ಹೇಳಿರುವ ಬಗ್ಗೆ ಯಾಕೆ ಸಿಎಂ ಮಾತಾಡುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಇನ್ನು ಕನ್ನಡಾಂಬೆಯ ಅರಿಶಿನ ಕುಂಕುಮ ಬಗ್ಗೆ ಆಡಿರುವ ಮಾತಿನ ಬಗ್ಗೆ ಬಾನು ಮುಷ್ತಾಕ್ ಕ್ಷಮೆ ಕೇಳಿದ್ದರೆ ನಾನು ಕೋರ್ಟ್‌ಗೆ ಹೋಗುತ್ತಿರಲಿಲ್ಲ. ಕ್ಷಮೆಯೆ ಕೇಳದವರು ಚಾಮುಂಡಿ ದೇವಿಗೆ ಗೌರವ ಕೊಡುತ್ತೀರಾ ಎಂದು ಹೇಗೆ ನಂಬುವುದು.? ಬಾನು ಮುಷ್ತಾಕ್ ಆಡಿರುವ ಮಾತಿಗೆ ಸ್ಪಷ್ಟೀಕರಣ ಕೊಡಲಿಲ್ಲ. ಬಾನು ಮುಷ್ತಾಕ್ ಬಹಿರಂಗವಾಗಿ ಕ್ಷಮೆ ಕೇಳಲಿ ನಾನು ಅರ್ಜಿ ವಾಪಸ್ ಪಡೆಯುತ್ತೇನೆ. ಭುವನೇಶ್ವರಿ ಬಗ್ಗೆ ಹೇಳಿರುವ ಹೇಳಿಕೆ ಬಗ್ಗೆ ಯಾಕೆ ಬಾನು ಮುಷ್ತಾಕ್ ಮಾತಾಡುತ್ತಿಲ್ಲ. ನಮ್ಮ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುತ್ತದೆ ಎಂದು ಕಾನೂನಾತ್ಮಕವಾಗಿಯೆ ಹೋರಾಟಕ್ಕೆ ಇಳಿದಿದ್ದೇನೆ. ಮುಸ್ಲಿಂಮರು ಶಾಂತಿ ಪ್ರಿಯರು ಎಂದು ಸಿಎಂ ಮೊನ್ನೆ ಹೇಳಿದ್ದಾರೆ.

ಮಂಡ್ಯದಲ್ಲಿ ಗಣೇಶ ಮೂರ್ತಿ ಮೇಲೆ ಕಲ್ಲು ಎಸೆದಿದ್ದು ಯಾರು ಸಿದ್ದರಾಮಯ್ಯ ಅವರೇ? ಹಿಂದೂಗಳಷ್ಟು ಜಾತ್ಯಾತೀತರು ಮತ್ತೊಬ್ಬರು ಇಲ್ಲ. ಸಿಎಂ ಹಿಂದೂಗಳಿಗೆ ಜಾತ್ಯಾತೀತ ಪಾಠ ಮಾಡಬೇಡಿ. ನಮ್ಮ ಸಂಸ್ಕೃತಿ ಬಗ್ಗೆ ಅಸಡ್ಡೆ ಮಾತಾಡುವ ಬಾನು ಮುಷ್ತಾಕ್ ಅವರು ನಮ್ಮ ಕಣ್ಣಿಗೆ ಘಜ್ನಿ, ಮೊಘಲರ ರೀತಿ ಕಾಣಿಸಿಕೊಳ್ಳುತ್ತಾರೆ. ಸಿಎಂ ಮುಸ್ಲಿಂಮರಿಗೆ ಉತ್ತೇಜನ ಕೊಡುತ್ತಿದ್ದಾರೆ. ಮುಸ್ಲಿಂಮರು ಶಾಂತಿ ಪ್ರಿಯರು ಎಂದ ಕ್ಷಣ ಮುಸ್ಲಿಂ ಇಲ್ಲಿ ಕಲ್ಲು ಎಸೆದಿದ್ದಾರೆ. ಸಿಎಂ – ಡಿಸಿಎಂ ಇಬ್ಬರಿಗೆ ಕೈ ಮುಗಿದು ಕೇಳ್ತಿನಿ ಬಾನು ಮುಷ್ತಾಕ್ ಭಾಷಣ ಒಪ್ಪುತ್ತೀರಾ ಹೇಳಿ? ಒಪ್ಪುವುದಾದರೆ ಧೈರ್ಯವಾಗಿ ಹೇಳಲಿ. ಸಿಎಂ – ಡಿಸಿಎಂ ಇಬ್ಬರು ಸೇರಿ ಬಾನು ಮುಷ್ತಾಕ್‌ರಿಂದ ಕನ್ನಡಿಗರಿಗೆ ಕ್ಷಮೆ ಕೇಳಿಸಲಿ. ನಾನು ಈಗಲೂ ಕೇಸ್ ವಾಪಸ್ ಪಡೆಯುತ್ತೇನೆ. ಕೇಸ್ ಮ್ಯಾನೇಜ್ ಮಾಡುವುದರಲ್ಲಿ ಸಿಎಂ ಬಹಳ ಚಾಣಾಕ್ಷರು.

ಮೂಡಾ ಕೇಸ್‌ನಲ್ಲೇ ಅದನ್ನು ನಾವು ನೋಡಿದ್ದೇವೆ. ನಮಗೆ ಕೇಸ್ ಬಗ್ಗೆ ಹೇಳಿ ಕೊಡುವುದಕ್ಕೆ ಬರಬೇಡಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

25 mins ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 hour ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

1 hour ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

1 hour ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

5 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

10 hours ago