Mysore
22
broken clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಎಂಎಲ್‌ಸಿ ಎಚ್.ವಿಶ್ವನಾಥ್‌ ಭವಿಷ್ಯ

ಮೈಸೂರು: ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗೋದು ಖಚಿತ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಭವಿಷ್ಯ ನುಡಿದಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ನವೆಂಬರ್‌ ತಿಂಗಳಿನಲ್ಲಿ ಸಿಎಂ ಬದಲಾಗುವುದು ಖಚಿತ ಎಂದು ಹೇಳಲಾಗುತ್ತಿದೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು, ನವೆಂಬರ್‌ ತಿಂಗಳಿನಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಸಿಎಂ ಬದಲಾವಣೆ ಆಗೋದು ಖಚಿತ ಎಂದರು.

ಡಿ.ಕೆ.ಶಿವಕುಮಾರ್‌ ಅಥವಾ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ನವೆಂಬರ್‌ ತಿಂಗಳಿನಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ನಿಶ್ಚಿತ ಎಂದು ಹೇಳಿದರು.

Tags:
error: Content is protected !!