ಸಿಎಂ ಬದಲಾವಣೆ ಬಿಜೆಪಿಯ ಅಜೆಂಡಾ ಅಲ್ಲ: ಮಾಜಿ ಎಂಎಲ್‌ಸಿ ಗೋ ಮಧುಸೂಧನ್‌

ಮೈಸೂರು: ಸಿಎಂ ಬದಲಾವಣೆ ಬಿಜೆಪಿಯ ಅಜೆಂಡಾ ಅಲ್ಲ ಎಂದು ಮಾಜಿ ಎಂಎಲ್‌ಸಿ ಗೋ ಮಧುಸೂಧನ್‌ ಹೇಳಿದ್ದಾರೆ.

ನವೆಂಬರ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿರುವ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಅವರ ಶಾಸಕರಿಗೆ ಬಿಟ್ಟ ವಿಚಾರ. ಬೇರೆ ನಾಯಕರ ಅಭಿಪ್ರಾಯ ನನ್ನ ಅಭಿಪ್ರಾಯ ಅಲ್ಲ. ಕಾಂಗ್ರೆಸ್ ಶಾಸಕರು ಸಿಎಂ ಬೇಕು ಅಂದ್ರೆ ಸಿದ್ದರಾಮಯ್ಯ ಅವರೇ ಇರ್ತಾರೆ. ಬೇಡ ಅಂದ್ರೆ ಅವರ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತೆ ಎಂದರು.

ಇನ್ನು ಬಿಜೆಪಿಯಲ್ಲಿ ಬಣ ಬಡಿದಾಟ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲವಿದ್ರೆ ಹಿರಿಯರು ಸರಿ ಮಾಡುತ್ತಾರೆ. ಅದನ್ನು ಬಿಟ್ಟು ಹಾದಿ ಬೀದಿಯಲ್ಲಿ ನಿಂತು ಪಕ್ಷದ ವಿರುದ್ಧ ಹಾಗೂ ನಾಯಕರ ವಿರುದ್ಧ ಮಾತನಾಡುವವರ ವಿರುದ್ಧ ಕ್ರಮ ಆಗುತ್ತದೆ. ಕೆಲವರ ಮೇಲೆ ಈಗಾಗಲೇ ಕ್ರಮ ಆಗಿದೆ. ಇನ್ನು ಕೆಲವರ ಮೇಲೆ ತಡವಾದರೂ ಕ್ರಮ ಆಗೇ ಆಗುತ್ತದೆ. ಪಕ್ಷಕ್ಕಿಂತ ಯಾರು ದೊಡ್ಡವರಲ್ಲಾ. ನಾವು ತತ್ವ ಸಿದ್ಧಾಂತದ ಮೇಲೆ ಪಕ್ಷ ಕಟ್ಟಿದವರು ಎಂದು ಹೇಳಿದರು.

ಇನ್ನು ತುರ್ತು ಪರಿಸ್ಥಿತಿಗೆ 50 ವರ್ಷವಾದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅಂದು ತುರ್ತು ಪರಿಸ್ಥಿತಿ ಇದ್ದಿದ್ದು ಇಂದಿರಾಗಾಂಧಿಗೆ, ದೇಶಕ್ಕಲ್ಲ. ಇಂದಿರಾಗಾಂಧಿ ವಿಪಕ್ಷ ನಾಯಕರನ್ನು ಜೈಲಿಗೆ ಕಳುಹಿಸಿದರು. ಪತ್ರಿಕಾ ಸ್ವಾತಂತ್ರ್ಯದ ಹರಣ ಆಗಿತ್ತು. ಸರ್ವಾಧಿಕಾರಿ ಆಡಳಿತ ಮಾಡಿದ್ದರು. ನ್ಯಾಯಾಲಯಕ್ಕೂ ಗೌರವ ಸಿಗದಂತೆ ಮಾಡಿದ್ದರು. ಅಂದು ಇಂದಿರಾಗಾಂಧಿ ಹೇಳಿದ್ದೆ ಶಾಸನ ಎಂಬಂತೆ ಆಗಿತ್ತು. ಅದರ ವಿರುದ್ಧ ದೇಶಾದ್ಯಂತ ಹೋರಾಟ ನಡೆಯಿತು. ಇಂದಿರಾಗಾಂಧಿ ಕರಾಳ ತುರ್ತು ಪರಿಸ್ಥಿತಿಗೆ ಇಂದು 50 ವರ್ಷ ತುಂಬಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

9 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

34 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

1 hour ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

2 hours ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago