ಮೈಸೂರು: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ತನ್ವೀರ್ ಸೇಠ್ ಅವರು, ರಾಜ್ಯದ ಜನ ಬಿಜೆಪಿ ವಿರುದ್ಧ ಸ್ಪಷ್ಟ ಅಧಿಕಾರ ನೀಡಿದ್ದಾರೆ. ನಿನ್ನೆಗೆ ನಮ್ಮ ಸರ್ಕಾರ ಎರಡೂವರೆ ವರ್ಷ ಪೂರೈಸಿದೆ. ಎಲ್ಲದಕ್ಕೂ ವರಿಷ್ಠರ ತೀರ್ಮಾನವೇ ಅಂತಿಮವಾಗಿರುತ್ತದೆ. ಸಿಎಂ, ಡಿಸಿಎಂ ಕೂಡ ಸಾರಿ ಸಾರಿ ಹೇಳಿದ್ದಾರೆ. ಅಧಿಕಾರ ಹಂಚಿಕೆ ಸೂತ್ರ ನಮಗೆ ಗೊತ್ತಿಲ್ಲ. ನಾನು ಯಾವ ಬಣದಲ್ಲೂ ಇಲ್ಲ. ನಾವು ನಾಯಕರ ಪೂಜೆ, ಆರಾಧನೆ ಮಾಡಲ್ಲ. ಕೇವಲ ರಾಜಕಾರಣ ಮಾಡಲು ಪಕ್ಷದಲ್ಲಿಲ್ಲ. ಡಿಕೆ ಸುರೇಶ್, ರಾಜಣ್ಣ ಅವರ ಹೇಳಿಕೆಗೆ ವೈಯ್ಯಕ್ತಿಕ ಸ್ವಾತಂತ್ರ್ಯವಿದೆ. ನಾನು ಆರಾಧಿಸುವ ದೈವವೇ ಸರಿ ಅನ್ನೋದು ಸರಿ ಅಲ್ಲ. ಡಿಕೆಶಿ ಋಣ ನನ್ನ ಮೇಲೆ ಇದ್ದೆ ಇದೆ. ಈ ಹಿಂದೆ ನನ್ನ ತಂದೆ ತೀರಿ ಹೋದ ಸಮಯದಲ್ಲಿ ಉಪಚುನಾವಣೆ ಬಂತು.
ಇದನ್ನು ಓದಿ: ಸಿಎಂ ಆಗಿ ನಾನೇ ಮುಂದುವರಿಯುತ್ತೇನೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಲೋಕಸಭಾ ಸೋತಿದ್ರೂ ಡಿಕೆಶಿ ನನ್ನ ಪರವಾಗಿ ಪ್ರಚಾರ ಮಾಡಿ ಗೆಲ್ಲಿಸಿದ್ರು. ನಾನು ಅದನ್ನು ಮರೆಯಲ್ಲ. ನಾನು ಪಕ್ಷೇತರವಾಗಿ ನಗರ ಪಾಲಿಕೆಗೆ ಆಯ್ಕೆಯಾಗಿದ್ದೆ. ಆ ಸಮಯದಲ್ಲಿ ಸಿದ್ದರಾಮಯ್ಯ ಜೆಡಿಎಸ್‌ನಲ್ಲಿದ್ದರು. ನನ್ನನ್ನು ಮೇಯರ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದರು. ಆದ್ರೆ ನಾನು ಮೇಯರ್ ಆಗಲಿಲ್ಲ. ಅದು ಬೇರೆ ವಿಚಾರ. ಸಿದ್ದರಾಮಯ್ಯ ಋಣ ಕೂಡ ನನ್ನ ಮೇಲಿದೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಬದಲಾವಣೆ ಬಗ್ಗೆ ಏನು ಮಾತನಾಡಬೇಡಿ ಎಂದು ಹೈಕಮಾಂಡ್ ಹೇಳಿದೆ ಎಂದರು.
ಇನ್ನು ಸಚಿವ ಸಂಪುಟ ಪುನಾರಚನೆ ಆದ್ರೆ ನನಗೂ ಸಚಿವ ಸ್ಥಾನ ಸಿಗುತ್ತದೆ. ಈ ಬಗ್ಗೆ ನನಗೆ ಸಂಪೂರ್ಣ ಭರವಸೆ ಇದೆ. ನಾನು ಸನ್ಯಾಸಿ ಅಲ್ಲ. ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ ನನ್ನ ಬೆಂಬಲವಿದೆ. ಹೈಕಮಾಂಡ್ ಯಾರನ್ನೇ ಸಿಎಂ ಮಾಡಿದ್ರು ನಾನು ಬೆಂಬಲಿಸುತ್ತೇನೆ. ಅಧಿಕಾರ ಕೊಟ್ಟವರ ಪರ ನಾನು ನಿಲ್ಲಲ್ಲ. ಪಕ್ಷದ ಪರ ನಾನು ನಿಲ್ಲುತ್ತೇನೆ ಎಂದು ಹೇಳಿದರು.
ಇನ್ನು ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಹಾಗೂ ಸಚಿವರು, ಶಾಸಕರ ದೆಹಲಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇಕ್ಬಾಲ್ ಹುಸೇನ್ ಯಾವ ಜಾತಿ ?
ನಾಯಕರ ಮೇಲೆ ಕೆಲವರು ನಂಬಿಕೆ ಇಟ್ಟುಕೊಂಡಿರುತ್ತಾರೆ. ಯಾರಿಗೆ ಬೆಂಬಲ ಇದೆ ಅವರ ಪರ ಕೆಲವರು ನಿಲ್ಲುತ್ತಾರೆ ಎಂದರು.
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…