ಮೈಸೂರು ನಗರ

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸಲಿದ್ದು, ಅವರನ್ನು ಸಿಎಂ ಡಿಕೆಶಿ ಸ್ವಾಗತಿಸಲಿದ್ದಾರೆ.

10 ಗಂಟೆಗೆ ಬೆಂಗಳೂರಿನಿಂದ ಹೊರಡಲಿರುವ ಸಿಎಂ ಡಿ.ಕೆ.ಶಿವಕುಮಾರ್‌ ಅವರು 10.45ಕ್ಕೆ ಮೈಸೂರಿಗೆ ಆಗಮಿಸಿ 11.30ಕ್ಕೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. 12.30ಕ್ಕೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ನಂತರ 3.15ಕ್ಕೆ ಪ್ರಧಾನಿ ಮೋದಿ ಅವರನ್ನು ಓವಲ್‌ ಗ್ರೌಂಡ್‌ ಹೆಲಿಪ್ಯಾಡ್‌ ಬಳಿ ಸಿಎಂ ಡಿ.ಕೆ.ಶಿವಕುಮಾರ್‌ ಸ್ವಾಗತಿಸಲಿದ್ದಾರೆ. ಇದಾದ ನಂತರ ರಾಮಕೃಷ್ಣ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರ, ವಿವೇಕ ಸ್ಮಾರಕದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಪಾಲ್ಗೊಳ್ಳಲಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

51 mins ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

59 mins ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

1 hour ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

2 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

11 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

11 hours ago