ಮೈಸೂರು: ಅರಣ್ಯ ಇಲಾಖೆಯ ಗಣನೀಯ ಸೇವೆ ಸಲ್ಲಿಸಿರುವ ದಸರಾ ಗಜಪಡೆಯ ಅಭಿಮನ್ಯುವಿನ ಮಾವುತ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ.
ವಸಂತ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದು, ಅದನ್ನು ಪೋಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಕ್ಯಾಪ್ಟನ್ ಅಭಿಮನ್ಯು ಸತತ ನಾಲ್ಕು ಬಾರಿ ಚಿನ್ನದ ಅಂಬಾರಿ ಹೊತ್ತಿದ್ದು, ಐದನೇ ಬಾರಿಗೆ ಅಂಬಾರಿ ಹೊರಲು ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಿದ್ದಾನೆ.
ದಸರಾ ಮಹೋತ್ಸವದ ಚಿನ್ನದ ಅಂಬಾರಿಯನ್ನು ಹೊರುವ ಕ್ಯಾಪ್ಟನ್ ಅಭಿಮನ್ಯುವಿನ ಮಾವುತ ವಸಂತ ಅವರು ಮುಖ್ಯಮಂತ್ರಿ ಪದಕ ಪಡೆದಿದ್ದಾರೆ. ವಸಂತ 100ಕ್ಕೂ ಹೆಚ್ಚು ಕಾಡಾನೆ ಹಾಗೂ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.
ಕಳೆದ 2017ರಲ್ಲಿ ಇಂಡೋನೇಷ್ಯಾ ದೇಶಕ್ಕೆ ಹೋಗಿ ಅಲ್ಲಿಯ ಆನೆಗಳಿಗೂ ಕೂಡ ತರಬೇತಿಯನ್ನು ಪಡೆಯಲು ಹಾಗೂ ರಾಜ್ಯದಲ್ಲಿ, ಶಿಬಿರಗಳಲ್ಲಿ ನೀಡುವ ತರಬೇತಿಯನ್ನು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಈ ಎಲ್ಲಾ ಸಾಧನೆಗಳನ್ನು ಪರಿಗಣಿಸಿ ವಸಂತ ಅವರಿಗೆ ರಾಜ್ಯ ಸರ್ಕಾರ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಿದೆ.