ಮೈಸೂರು ನಗರ

ದಸರಾ ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು ಮಾವುತ ವಸಂತರಿಗೆ ಮುಖ್ಯಮಂತ್ರಿ ಪದಕ

ಮೈಸೂರು: ಅರಣ್ಯ ಇಲಾಖೆಯ ಗಣನೀಯ ಸೇವೆ ಸಲ್ಲಿಸಿರುವ ದಸರಾ ಗಜಪಡೆಯ ಅಭಿಮನ್ಯುವಿನ ಮಾವುತ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ.

ವಸಂತ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದು, ಅದನ್ನು ಪೋಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಕ್ಯಾಪ್ಟನ್‌ ಅಭಿಮನ್ಯು ಸತತ ನಾಲ್ಕು ಬಾರಿ ಚಿನ್ನದ ಅಂಬಾರಿ ಹೊತ್ತಿದ್ದು, ಐದನೇ ಬಾರಿಗೆ ಅಂಬಾರಿ ಹೊರಲು ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಿದ್ದಾನೆ.

ದಸರಾ ಮಹೋತ್ಸವದ ಚಿನ್ನದ ಅಂಬಾರಿಯನ್ನು ಹೊರುವ ಕ್ಯಾಪ್ಟನ್‌ ಅಭಿಮನ್ಯುವಿನ ಮಾವುತ ವಸಂತ ಅವರು ಮುಖ್ಯಮಂತ್ರಿ ಪದಕ ಪಡೆದಿದ್ದಾರೆ. ವಸಂತ 100ಕ್ಕೂ ಹೆಚ್ಚು ಕಾಡಾನೆ ಹಾಗೂ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

ಕಳೆದ 2017ರಲ್ಲಿ ಇಂಡೋನೇಷ್ಯಾ ದೇಶಕ್ಕೆ ಹೋಗಿ ಅಲ್ಲಿಯ ಆನೆಗಳಿಗೂ ಕೂಡ ತರಬೇತಿಯನ್ನು ಪಡೆಯಲು ಹಾಗೂ ರಾಜ್ಯದಲ್ಲಿ, ಶಿಬಿರಗಳಲ್ಲಿ ನೀಡುವ ತರಬೇತಿಯನ್ನು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಈ ಎಲ್ಲಾ ಸಾಧನೆಗಳನ್ನು ಪರಿಗಣಿಸಿ ವಸಂತ ಅವರಿಗೆ ರಾಜ್ಯ ಸರ್ಕಾರ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

8 mins ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

20 mins ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

31 mins ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

32 mins ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

38 mins ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

41 mins ago