pralhad joshi
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಹೊತ್ತು ಈ ಕ್ಷಣವೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆಯ ನೈತಿಕ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕು. ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಒಂದು ಕ್ಷಣ ಕೂಡ ತಮ್ಮ ಸ್ಥಾನದಲ್ಲಿ ಮುಂದುವರಿಯಬಾರದು. ಈ ಕ್ಷಣವೇ ಸಿಎಂ ಹಾಗೂ ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇನ್ನು ಬೆಂಗಳೂರು ಕಮಿಷನ್ ಬರವಣಿಗೆಯಲ್ಲಿ ಭದ್ರತೆ ನಿರಾಕರಿಸಿಲ್ಲ ಎಂಬ ಕಾರಣಕ್ಕೆ ಸಸ್ಪೆಂಡ್ ಮಾಡಿದ್ದೀರಿ. ನೀವೇ ನಿಮ್ಮ ಟ್ವಿಟ್ಟರ್‌ನಲ್ಲಿ ಅಭಿಮಾನಿಗಳಿಗೆ ಕರೆ ಕೊಟ್ಟಿಲ್ವ. ನಿಮ್ಮ ಡಿಸಿಎಂ ಏರ್‌ಪೋರ್ಟ್‌ಗೆ ಹೋಗಿ ಭಾವುಟ ಹಿಡಿದುಕೊಂಡು ಬರಲಿಲ್ವ. ಅಂದು ಇಡೀ ದಿನ ಡಿಕೆ.ಶಿವಕುಮಾರ್ ದಾದಾಗಿರಿ ಮಾಡಿದ್ದಾರೆ. ಹೈಕಮಾಂಡ್‌ನಲ್ಲಿ ಕಮಾಂಡ್ ಇದ್ದರೆ ಮೊದಲು ಇವರ ಮೇಲೆ ಕ್ರಮ ಕೈಗೊಳ್ಳಿ. ರಾಹುಲ್‌ಗಾಂಧಿ ಇಡೀ ಪ್ರಪಂಚದಾದ್ಯಂತ ಹೋಗಿ ಎಲ್ಲವನ್ನ ಮಾತನಾಡುತ್ತಾರೆ. ಈ ಘಟನೆ ಬಗ್ಗೆ ಅವರಿಗೆ ಗೊತ್ತಿಲ್ವ ಎಂದು ಕಿಡಿಕಾರಿದರು.
ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮೂರು ಜನ ಸತ್ತ ನಂತರವೂ ವಿಧಾನಸೌಧದ ಬಳಿ ಸಿಎಂ, ಡಿಸಿಎಂ, ಅವರ ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳು, ಐಎಎಸ್ ಆಫೀಸರ್‌ಗಳು ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಅವರು ಸೆಲ್ಫಿ ತೆಗೆಸಿಕೊಳ್ಳುವಾಗ ಅಲ್ಲಿ ಮೂರು ಜನ ಸತ್ತಿದ್ರು. ಇದು ಅಕ್ಷಮ್ಯ ಅಪರಾಧ ಅಲ್ಲವೇ? 11 ಜನ ಸತ್ತ ನಂತರೂ ಕಾರ್ಯಕ್ರಮ ನಡೆದಿದೆ. ಹೈಕೋರ್ಟ್ ಸುಮೋಟೊ ಕೇಸ್ ಹಾಕಿದ ನಂತರ ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಮಧ್ಯಪ್ರಾಚ್ಯ ಯುದ್ಧದ ಬಿಸಿಗೆ ನಲುಗಿದ ಮೈಸೂರು ಹೋಟೆಲ್‌ಗಳು ಸೌದೆ ಒಲೆಗೆ ಮೊರೆ ಹೋದ ನ್ಯೂ ಲಕ್ಷ್ಮಿ ಭವನ; ಅನಿಲದ ಹಂಗಿಲ್ಲದ…
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…