ಮೈಸೂರು ನಗರ

ಈ ಕ್ಷಣವೇ ಸಿಎಂ ಹಾಗೂ ಡಿಸಿಎಂ ರಾಜೀನಾಮೆ ನೀಡಬೇಕು: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಹೊತ್ತು ಈ ಕ್ಷಣವೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆಯ ನೈತಿಕ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕು. ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಒಂದು ಕ್ಷಣ ಕೂಡ ತಮ್ಮ ಸ್ಥಾನದಲ್ಲಿ ಮುಂದುವರಿಯಬಾರದು. ಈ ಕ್ಷಣವೇ ಸಿಎಂ ಹಾಗೂ ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇನ್ನು ಬೆಂಗಳೂರು ಕಮಿಷನ್ ಬರವಣಿಗೆಯಲ್ಲಿ ಭದ್ರತೆ ನಿರಾಕರಿಸಿಲ್ಲ ಎಂಬ ಕಾರಣಕ್ಕೆ ಸಸ್ಪೆಂಡ್ ಮಾಡಿದ್ದೀರಿ. ನೀವೇ ನಿಮ್ಮ ಟ್ವಿಟ್ಟರ್‌ನಲ್ಲಿ ಅಭಿಮಾನಿಗಳಿಗೆ ಕರೆ ಕೊಟ್ಟಿಲ್ವ. ನಿಮ್ಮ ಡಿಸಿಎಂ ಏರ್‌ಪೋರ್ಟ್‌ಗೆ ಹೋಗಿ ಭಾವುಟ ಹಿಡಿದುಕೊಂಡು ಬರಲಿಲ್ವ. ಅಂದು ಇಡೀ ದಿನ ಡಿಕೆ.ಶಿವಕುಮಾರ್ ದಾದಾಗಿರಿ ಮಾಡಿದ್ದಾರೆ. ಹೈಕಮಾಂಡ್‌ನಲ್ಲಿ ಕಮಾಂಡ್ ಇದ್ದರೆ ಮೊದಲು ಇವರ ಮೇಲೆ ಕ್ರಮ ಕೈಗೊಳ್ಳಿ. ರಾಹುಲ್‌ಗಾಂಧಿ ಇಡೀ ಪ್ರಪಂಚದಾದ್ಯಂತ ಹೋಗಿ ಎಲ್ಲವನ್ನ ಮಾತನಾಡುತ್ತಾರೆ. ಈ ಘಟನೆ ಬಗ್ಗೆ ಅವರಿಗೆ ಗೊತ್ತಿಲ್ವ ಎಂದು ಕಿಡಿಕಾರಿದರು.

ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮೂರು ಜನ ಸತ್ತ ನಂತರವೂ ವಿಧಾನಸೌಧದ ಬಳಿ ಸಿಎಂ, ಡಿಸಿಎಂ, ಅವರ ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳು, ಐಎಎಸ್ ಆಫೀಸರ್‌ಗಳು ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಅವರು ಸೆಲ್ಫಿ ತೆಗೆಸಿಕೊಳ್ಳುವಾಗ ಅಲ್ಲಿ ಮೂರು ಜನ ಸತ್ತಿದ್ರು. ಇದು ಅಕ್ಷಮ್ಯ ಅಪರಾಧ ಅಲ್ಲವೇ? 11 ಜನ ಸತ್ತ ನಂತರೂ ಕಾರ್ಯಕ್ರಮ ನಡೆದಿದೆ. ಹೈಕೋರ್ಟ್ ಸುಮೋಟೊ ಕೇಸ್ ಹಾಕಿದ ನಂತರ ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

8 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

9 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago