ಮೈಸೂರು: ಓರ್ವ ಶ್ರೇಷ್ಠ ನಾಯಕನ ಪದಚ್ಯುತಿ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ.
ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಲಿಕ್ಕೆ ನಿಮ್ಮ ಹಣೆಯಲ್ಲೇ ಬರೆದಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇವತ್ತು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಒಂದು ಕರಾಳ ದಿನ. ಮುಂದಿನ ದಿನಗಳಲ್ಲಿ ಯಾವ ರೀತಿ ಕಾನೂನಿನ ಹೋರಾಟ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಗುತ್ತದೆ.
ರಾಜ್ಯಪಾಲರು ಸಂವಿಧಾನ ವಿರೋಧಿ ನಡೆ ಅನುಸರಿಸಿದ್ದಾರೆ. ಒಬ್ಬ ಶ್ರೇಷ್ಠ ನಾಯಕನ ಪದಚ್ಯುತಿ ಮಾಡುವ ಹುನ್ನಾರ ಬಿಜೆಪಿಯವರದ್ದಾಗಿದೆ ಎಂದು ಟೀಕೆ ಮಾಡಿದರು.