ಮೈಸೂರು ನಗರ

ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆಕ್ರೋಶ

ಮೈಸೂರು: ಓರ್ವ ಶ್ರೇಷ್ಠ ನಾಯಕನ ಪದಚ್ಯುತಿ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ.

ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಲಿಕ್ಕೆ ನಿಮ್ಮ ಹಣೆಯಲ್ಲೇ ಬರೆದಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇವತ್ತು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಒಂದು ಕರಾಳ ದಿನ. ಮುಂದಿನ ದಿನಗಳಲ್ಲಿ ಯಾವ ರೀತಿ ಕಾನೂನಿನ ಹೋರಾಟ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಗುತ್ತದೆ.

ರಾಜ್ಯಪಾಲರು ಸಂವಿಧಾನ ವಿರೋಧಿ ನಡೆ ಅನುಸರಿಸಿದ್ದಾರೆ. ಒಬ್ಬ ಶ್ರೇಷ್ಠ ನಾಯಕನ ಪದಚ್ಯುತಿ ಮಾಡುವ ಹುನ್ನಾರ ಬಿಜೆಪಿಯವರದ್ದಾಗಿದೆ ಎಂದು ಟೀಕೆ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

2 hours ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

2 hours ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

2 hours ago

ಗುಬ್ಬಚ್ಚಿ ಶಾಲೆಯಲ್ಲಿ ಬರೀ 12 ವಿದ್ಯಾರ್ಥಿಗಳು!

ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…

2 hours ago

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

11 hours ago