Mysore
15
broken clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

Senior journalist KB Ganapathy passes away

ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ.ಗಣಪತಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ನನ್ನೂರಿನ ಹಿರಿಯ ಪತ್ರಕರ್ತ ಮಿತ್ರರಾದ ಕೆ.ಬಿ.ಗಣಪತಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಗಣಪತಿಯವರ ಅಗಲಿಕೆಯಿಂದ ನಾಡಿನ ಪತ್ರಿಕಾರಂಗ ಬಡವಾಗಿದೆ.

ಸುಮಾರು ಐದು ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಅವಿರತ ದುಡಿದ ಗಣಪತಿ ಅವರು ವಸ್ತುನಿಷ್ಠ ಹಾಗೂ ವೃತ್ತಿಪರ ಬರಹಗಳಿಗೆ ಹೆಸರುವಾಸಿ. ಸ್ಟಾರ್‌ ಆಫ್‌ ಮೈಸೂರು ಪತ್ರಿಕೆಯ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪಾರ ಓದುಗರ ಬಳಗ ಸೃಷ್ಟಿಸಿದ ಗಣಪತಿಯವರು ಮೈಸೂರು ಮಿತ್ರ ದಿನಪತ್ರಿಕೆಯ ಸ್ಥಾಪಕ ಸಂಪಾದಕರಾಗಿ ಕೂಡ ಸೇವೆ ಸಲ್ಲಿಸಿದ್ದರು.

ಪತ್ರಿಕೋದ್ಯಮದಲ್ಲಿ ಅವರು ಮೂಡಿಸಿರುವ ಹೆಜ್ಜೆ ಗುರುತುಗಳು ಯುವ ಪತ್ರಕರ್ತರಿಗೆ ಸ್ಪೂರ್ತಿ ಮತ್ತು ಮಾದರಿಯಾಗಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇವೆ ಎಂದು ಸಂತಾಪ ಸೂಚಿಸಿದ್ದಾರೆ.

Tags:
error: Content is protected !!