Senior journalist KB Ganapathy passes away
ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ.ಗಣಪತಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನೂರಿನ ಹಿರಿಯ ಪತ್ರಕರ್ತ ಮಿತ್ರರಾದ ಕೆ.ಬಿ.ಗಣಪತಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಗಣಪತಿಯವರ ಅಗಲಿಕೆಯಿಂದ ನಾಡಿನ ಪತ್ರಿಕಾರಂಗ ಬಡವಾಗಿದೆ.
ಸುಮಾರು ಐದು ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಅವಿರತ ದುಡಿದ ಗಣಪತಿ ಅವರು ವಸ್ತುನಿಷ್ಠ ಹಾಗೂ ವೃತ್ತಿಪರ ಬರಹಗಳಿಗೆ ಹೆಸರುವಾಸಿ. ಸ್ಟಾರ್ ಆಫ್ ಮೈಸೂರು ಪತ್ರಿಕೆಯ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪಾರ ಓದುಗರ ಬಳಗ ಸೃಷ್ಟಿಸಿದ ಗಣಪತಿಯವರು ಮೈಸೂರು ಮಿತ್ರ ದಿನಪತ್ರಿಕೆಯ ಸ್ಥಾಪಕ ಸಂಪಾದಕರಾಗಿ ಕೂಡ ಸೇವೆ ಸಲ್ಲಿಸಿದ್ದರು.
ಪತ್ರಿಕೋದ್ಯಮದಲ್ಲಿ ಅವರು ಮೂಡಿಸಿರುವ ಹೆಜ್ಜೆ ಗುರುತುಗಳು ಯುವ ಪತ್ರಕರ್ತರಿಗೆ ಸ್ಪೂರ್ತಿ ಮತ್ತು ಮಾದರಿಯಾಗಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇವೆ ಎಂದು ಸಂತಾಪ ಸೂಚಿಸಿದ್ದಾರೆ.
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…