ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಅರಮನೆ ಮೈದಾನದಲ್ಲಿ ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿದರು.
ಕರ್ನಾಟಕ ಏಕೀಕರಣ 50ರ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿ ಬಿಂಬಿಸುವ ಬೃಹತ್ ಕಾರ್ಯಕ್ರಮ ನಡೆಸುತ್ತಿದೆ.
ಮೈಸೂರು, ಬೆಳಗಾವಿ, ಮಂಗಳೂರು, ಕಲಬುರ್ಗಿಯಲ್ಲಿ ಆಯಾಯ ಪ್ರಾದೇಶಿಕತೆಯ ವೈಶಿಷ್ಟ್ಯಗಳನ್ನು ಒಳಗೊಂಡಂತೆ ಕನ್ನಡ ಸುವರ್ಣ ರಥ ಅಭಿಯಾನ ನಡೆಯುತ್ತಿದೆ.
ಸುವರ್ಣ ಸಂಭ್ರಮ ನವೆಂಬರ್.1ರಂದು ಕನ್ನಡ ರಾಜ್ಯೋತ್ಸವದೊಂದಿಗೆ ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದೆ. ಈಗಾಗಲೇ ರಾಜ್ಯದಲ್ಲಿ ಸಂಚರಿಸುತ್ತಿರುವ ಸುವರ್ಣ ರಥ ಅಂದು ರಾಜಧಾನಿ ತಲುಪಲಿದೆ. ಈ ಬಾರಿ ವಿವಿಧ ಕ್ಷೇತ್ರರದ 50 ಸಾಧಕರನ್ನು ಸನ್ಮಾನಿಸಲಾಗುತ್ತದೆ. 5 ಬೃಹತ್ ಸಂಪುಟಗಳು ಲೋಕಾರ್ಪಣೆಯಾಗಲಿವೆ.
ಈ ಹಿನ್ನೆಲೆಯಲ್ಲಿಂದು ಮೈಸೂರಿನ ಅರಮನೆ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿ, ಅಭಿಯಾನ ಯಶಸ್ವಿಯಾಗಲೆಂದು ಶುಭ ಹಾರೈಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಕೆ.ವೆಂಕಟೇಶ್, ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ, ಶಾಸಕ ಕೆ.ಹರೀಶ್ ಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.