Mysore
33
few clouds

Social Media

ಶನಿವಾರ, 07 ಮಾರ್ಚ್ 2026
Light
Dark

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

cm siddaramaiah

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.

ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ ಪಿಲ್ಲಹಳ್ಳಿ ಗ್ರಾಮಕ್ಕೆ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ

ಶ್ರೀ ದಂಡಿಮಾರಮ್ಮ ಮತ್ತು ಶ್ರೀ ಸಿದ್ದಪ್ಪಾಜಿ ಸೇವಾ ಸಮಿತಿ ವತಿಯಿಂದ ಆಯೋಜಿಸಿರುವ ಶ್ರೀ ಆದಿಶಕ್ತ್ಯಾತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನೆ ಮಹೋತ್ಸವ ಹಾಗೂ ಕುಂಭ ಕಳಶದ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಂತರ ಮಧ್ಯಾಹ್ನ 01.20ಕ್ಕೆ ಹೆಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ: 01:40ಕ್ಕೆ ಹೆಚ್.ಡಿ.ಕೋಟೆ ತಾಲ್ಲೂಕಿನ ಶಿರಮಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀದೇವಿ (ಹುಚ್ಚಮ್ಮ) ಅಮ್ಮನವರ ನೂತನ ದೇವಾಲಯ ಉದ್ಘಾಟನಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ: 3.50ಕ್ಕೆ ಮೈಸೂರು ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಸಂಜೆ: 05 ಘಂಟೆಗೆ ಮಂಗಳೂರಿಗೆ ವಿಶೇಷ ವಿಮಾನ ಪ್ರಯಾಣ ಬೆಳೆಸಲಿದ್ದಾರೆ.

Tags:
error: Content is protected !!