ಮೈಸೂರು ನಗರ

ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರು: ಸಿಎಂ ಸಿದ್ದು ಪರ ಬ್ಯಾಟಿಂಗ್‌ ಮಾಡಿದ ಪ್ರತಾಪ್‌ ಸಿಂಹ

ಮೈಸೂರು: ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಈ ಮಧ್ಯೆಯೇ ಅವರ ಹೆಸರನ್ನು ರಸ್ತೆಗೆ ನಾಮಕರಣ ಮಾಡುವುದರಲ್ಲಿ ತಪ್ಪೇನಿದೆ ಎಂದು? ಸಿಎಂ ಸಿದ್ದಾರಮಯ್ಯ ಪರ ಮಾಜಿ ಸಂಸದ ಪ್ರತಾಪ್‌ ಸಿಂಹ ಬ್ಯಾಟಿಂಗ್‌ ಮಾಡಿದ್ದಾರೆ.

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಅಂಗವಾಗಿ ಚಾಮರಾಜ ವಿಧಾನಸಭಾ ಕ್ಷೇತ್ರದ ಸದ್ಭಾವನ ಯುವಕರ ಸಂಘದ ವತಿಯಿಂದ ನಗರದ ಚಿಕ್ಕಗಡಿಯಾರದ ಆವರಣದಲ್ಲಿ ಇಂದು(ಡಿಸೆಂಬರ್‌.25) ಮೈಸೂರು ಮುಖ್ಯ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯನವರು ಮೈಸೂರಿನ ಸುಪುತ್ರನಾಗಿದ್ದು, ಎರಡೂ ಬಾರಿ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಅವರು ಮೈಸೂರಿಗೆ ಹಲವು ಬಾರಿ ಶಾಶ್ವತ ಕೊಡುಗೆಗಳನ್ನು ನೀಡಿದ್ದಾರೆ. ಅವರನ್ನು ಕೇವಲ ಕಾಂಗ್ರೆಸ್‌ ಪಕ್ಷಕ್ಕೆ ಸೀಮಿತ ಮಾಡಬಾರದು. ಈ ವಿಚಾರಕ್ಕೆ ವಿರೋಧ ಮಾಡುತ್ತಿರುವುದನ್ನು ನೋಡಿದರೆ, ಮೊಸರಲ್ಲಿ ಕಲ್ಲು ಹುಡುಕುವಂತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ರಸ್ತೆಗಳಿಗೆ ಕವಿಗಳು ಮತ್ತು ಸಾಧಕರ ಹೆಸರನ್ನು ನಾಮಕರಣ ಮಾಡುವುದು ವಾಡಿಕೆಯಾಗಿದೆ. ಅಂತೆಯೇ ಮೈಸೂರಿಗೆ ಆಶ್ರಯಧಾತರಾಗಿರುವ ಚಾಮರಾಜ ಒಡೆಯರ್‌, ನಾಲ್ವಡೀ ಕೃಷ್ಣರಾಜ ಒಡೆಯರ್‌ ಹಾಗೂ ದಿವಾನರ ಹೆಸರುಗಳನ್ನಿಟ್ಟಿದ್ದಾರೆ. ಇವರಂತೆಯೇ ಸಿದ್ದರಾಮಯ್ಯ ಅವರು ಸಹ ತಮ್ಮ ನಾಲ್ವತ್ತು ವರ್ಷದ ರಾಜಕೀಯ ಜೀವನದಲ್ಲಿ ಮೈಸೂರಿಗೆ ಕೊಡುಗೆಗಳನ್ನು ನೀಡಿದ್ದಾರೆ. ಅದರಲ್ಲೂ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣ ಮಾಡುವ ವೇಳೆ ಮಾಜಿ ಶಾಸಕ ಪಿ.ವಾಸು ಹಾಗೂ ಸಿದ್ದರಾಮಯ್ಯ ಅವರ ಕೊಡುಗೆ ಅಪಾರವಾಗಿದೆ. ಹೀಗಾಗಿ ಸಿದ್ದರಾಮಯ್ಯ ಹೆಸರನ್ನು ನಾಮಕರಣ ಮಾಡುವ ಪ್ರಸ್ತಾವನೆ ಯಾರು ಆಕ್ಷೇಪ ಮಾಡಬಾರದು ಎಂದು ಹೇಳಿದ್ದಾರೆ.

ನಾನು ಸೈದ್ಧಾಂತಿಕವಾಗಿ ಇವತ್ತಿಗೂ ಸಿದ್ದರಾಮಯ್ಯ ಅವರನ್ನು ವಿರೋಧಿಸುತ್ತೇನೆ. ಆದರೆ, ಸಾಧಕರನ್ನು ಗುರುತಿಸುವ ವಿಚಾರಲ್ಲಿ ಅಲ್ಲ. ಇಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಎಂಬ ಪಕ್ಷ ಭೇದ ಬೇಡ. ಹಾಗಾಗಿ ಮೈಸೂರು ಹೃದಯ ಭಾಗದಲ್ಲಿರುವ ಒಂಟಿಕೊಪ್ಪಲ್‌ನ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಿಂದ ರಾಯಲ್‌ ಇನ್‌ ಹೊಟೇಲ್‌ವರೆಗಿನ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡಲು ಸಾಧನೆಗೆ ಪಕ್ಷ ತರಬೇಡಿ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರು ಸೂಕ್ತ ಕ್ರಮ ಕೈಗೊಳ್ಳಬೇಕು

ಇದೇ ಸಂದರ್ಭದಲ್ಲಿ ಸಿ.ಟಿ.ರವಿ ಪ್ರಕರಣ ಬಗ್ಗೆ ಮಾತನಾಡಿದ ಅವರು, ಸದನದ ಪ್ರಾಂಗಣದಲ್ಲಿ ನಡೆಯುವ ಚುಟುವಟಿಕೆಗಳು, ಘಟನೆಗಳು ಹಾಗೂ ವಾಕ್‌ ಯುದ್ಧಗಳಿಗೆ ತೀರ್ಮಾನ ಕೊಡುವವರು ಸಭಾಪತಿಯಾಗಿರುತ್ತಾರೆ. ಆದರೆ ಈ ಪ್ರಕರಣ ದ್ವೇಷದ ರಾಜಕಾರಣ ಎಂಬಂತೆ ಕಾಣುತ್ತಿದೆ. ಇದೊಂದು ಪ್ರಕರಣ ಮುಂದಿನ ದಿನಗಳಲ್ಲಿ ಕೆಟ್ಟ ರಾಜಕಾರಣಕ್ಕೆ ಕಾರಣವಾಗುತ್ತದೆ. ಹೀಗಾಗಿ ಪ್ರಬುಧ್ಧರಾಗಿರುವ
ಸಿಎಂ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಂಡು ಸಭಾಧ್ಯಕ್ಷರಿಗೆ ನಿರ್ಧಾರ ಮಾಡಲು ತಿಳಿಸಬೇಕು ಎಂದು ಮನವಿ ಮಾಡಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಟ್ರಂಪ್‌ ಭಾಷಣದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ

ವಾಷಿಂಗ್ಟನ್:‌ ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…

4 mins ago

ಮಂಡ್ಯದಲ್ಲಿಂದು ವಿಶ್ವ ಹಿಂದೂ ಪರಿಷತ್‌ ಬೃಹತ್‌ ಶೋಭಾಯಾತ್ರೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್‌,…

22 mins ago

2 ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ದೇಶವನ್ನು…

51 mins ago

ಶ್ರೀ ಸಬ್ಬಮ್ಮ ನೆಲೆಯ ಮಲೆನಾಡಿನಾದ್ಯಂತ ಸುಗ್ಗಿ ಉತ್ಸವ ಶುರು

ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…

1 hour ago

ಚಾಮರಾಜನಗರದಲ್ಲಿ ನೀರಿನ ಸಮಸ್ಯೆ ಮುಂದೆ ಇನ್ನೂ ಉಲ್ಭಣ!

ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…

2 hours ago

ಚಂದಿರನತ್ತ ಮಾನವ: ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿ

ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…

2 hours ago