ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ರಘು ಕೌಟಿಲ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸ್ವಾಗತಾರ್ಹ. ರಾಮಕೃಷ್ಣ ಹೆಗಡೆ ನನ್ನ ಆದರ್ಶ ವ್ಯಕ್ತಿ ಎನ್ನುತ್ತಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಒತ್ತಾಯಿಸಿದರು.
ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಇಂದು ಜಯ ಸಿಕ್ಕಿದೆ. ನೀವು ಸದನದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ನೀಡಿದ್ರೆ ನಾವು ಪಾದಯಾತ್ರೆ ಮಾಡುತ್ತಿರಲಿಲ್ಲ. ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ರಾಮಕೃಷ್ಣ ಹೆಗಡೆ ಅವರು ಒಂದೇ ಒಂದು ಟೆಲಿಫೋನ್ ಪ್ರಕರಣದಲ್ಲಿ ರಾಜೀನಾಮೆ ನೀಡಿದರು. ಆದ್ದರಿಂದ ಸಿದ್ದರಾಮಯ್ಯ ಅವರೂ ಸಹ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ನಿರ್ದೋಷಿ ಎಂದು ಸಾಬೀತುಪಡಿಸಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…