ಮೈಸೂರು ನಗರ

ಮುಡಾ ಹಗರಣ: ತಪ್ಪು ಮಾಡಿದವರ ಮೇಲೆ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿರುವ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್‌ ಅವರನ್ನು ನಗರಾಭಿವೃದ್ಧಿ ಇಲಾಖೆ ಅಮಾನತು ಮಾಡಿದೆ ಎಂದರು.

ಅವರು ಇಂದು (ಸೆಪ್ಟೆಂಬರ್ 03) ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಬ್ಬರೂ ಆಯುಕ್ತರ ಮೇಲೆ ಆರೋಪ ಕೇಳಿಬಂದಿತ್ತು. ಒಬ್ಬರನ್ನು ಮಾತ್ರ ಅಮಾನತು ಮಾಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಆಯೋಗ ರಚಿಸಲಾಗಿದ್ದು, ಅವರ ವರದಿ ಪ್ರಕಾರ ಯಾರು ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ವಹಿಸಲಾಗುವುದು ಎಂದರು.

2009ರ ಹಿಂದಿನ ಬಡಾವಣೆಗಳಿಗೆ 50:50 ಅನುಪಾತ ಅನ್ವಯವಾಗುವುದಿಲ್ಲವಾದರೂ ಅನ್ವಯ ಮಾಡಿದ್ದಾರೆ ಎಂದು ಅಮಾನತು ಆದೇಶದಲ್ಲಿ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

ನಾನು ಸುಳ್ಳು ಹೇಳಿಲ್ಲ ಹಾಗೂ ತಪ್ಪು ಮಾಡಿಲ್ಲ: ಚಾಮುಂಡಿ ಬೆಟ್ಟಕ್ಕೆ ಹೋಗಿ ತಾಯಿಯ ದರ್ಶನ ಮಾಡುತ್ತಿದ್ದೇನೆ. ವಿರೋಧ ಪಕ್ಷದವರಿಗೆ ಸುಳ್ಳು ಹೇಳಿರುವುದು ರುಜುವಾತಾಗದೆ ಹೋದರೆ ಕಷ್ಟವಾಗುತ್ತದೆ ಎಂದು ಯೋಚಿಸುತ್ತಿದ್ದಾರೆ. ನಾನು ಸುಳ್ಳು ಹೇಳಿಲ್ಲ ಹಾಗೂ ತಪ್ಪು ಮಾಡಿಲ್ಲ ಎಂದರು.

ಮುಖ್ಯಮಂತ್ರಿಯನ್ನು ಶಾಸಕರು, ವರಿಷ್ಠರು ಆಯ್ಕೆ ಮಾಡುತ್ತಾರೆ: ಶಾಸಕ ಆರ್.ವಿ.ದೇಶಪಾಂಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಗಳಾಗಿರುತ್ತಾರೆ. ಸಿಎಂ ಒಪ್ಪಿಗೆ ಕೊಟ್ಟರೆ ಮುಖ್ಯಮಂತ್ರಿಯಾಗುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಮುಖ್ಯಮಂತ್ರಿಯನ್ನು ಶಾಸಕರು, ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದರು.

ಕೋವಿಡ್ ಭ್ರಷ್ಟಾಚಾರ ಕುರಿತ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಕೋವಿಡ್ ಸಂದರ್ಭದಲ್ಲಿ ಆಗಿರುವ ಭ್ರಷ್ಟಾಚಾರ ಕುರಿತ ವರದಿ ಸಲ್ಲಿಕೆಯಾಗಿದ್ದು ಈ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಅಂದು ವರದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ರಾಜಕೀಯ ಉದ್ದೇಶದಿಂದ ವರದಿ ತರಿಸಲಾಗಿದೆ ಎಂದು ಸಂಸದ ಸುಧಾಕರ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಏಕೆ ಮುಟ್ಟಿ ನೋಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ವರದಿಯಲ್ಲಿ ಏನಿದೆ ಎಂದು ನನಗೆ ತಿಳಿದಿಲ್ಲ. ತಪ್ಪು ಮಾಡಿರುವುದರಿಂದ ಚಡಪಡಿಸುತ್ತಿದ್ದಾರೆ. ಸುಳ್ಳು ವರದಿ ತರಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಲು ವರದಿ ಬಹಿರಂಗವಾಗಿಲ್ಲ. ಆದರೂ ಈ ರೀತಿ ಹೇಳಿಕೆ ನೀಡುತ್ತಾರೆ ಎಂದರೆ ಮನಸ್ಥಿತಿ ಏನಾಗಿದೆ ತಿಳಿಯುತ್ತದೆ ಎಂದರು.

ಏಳು ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ವರದಿ ಬಗ್ಗೆ ನನಗೆ ತಿಳಿದಿಲ್ಲ, ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ವಿಳಂಬ: ಪರಿಶೀಲನೆ
ಅಂಗನವಾಡಿ ಕಾರ್ಯಕರ್ತೆಯರಿಗೆ ಮೂರು ತಿಂಗಳಿನಿಂದ ಸಂಬಳ ದೊರೆತಿಲ್ಲದಿರುವ ಬಗ್ಗೆ ಮಾತನಾಡಿ ಸಂಬಳ ನೀಡಲಾಗಿದೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಂಗಾಳ-ಕೇರಳದಲ್ಲಿ ಬದಲಾವಣೆಯ ಸುಳಿವು?

ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…

3 hours ago

ಪೊದೆಗಳ ನಡುವೆ ಮರೆಯಾಗಿರುವ ಚನ್ನಕೇಶವ ದೇವಾಲಯ

ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…

3 hours ago

ಮಂಗಳಮುಖಿಯರ ‘ಮನೆ ನ್ಯಾಯ!’

ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ…

3 hours ago

ನಳಂದ ಅಕಾಡೆಮಿ

ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ  ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು…

3 hours ago

ಎರಡೇ ದಿನಕ್ಕೆ 168 ಹೆಕ್ಟೇರ್ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ…

3 hours ago

ಭಾರೀ ಗಾಳಿ-ಮಳೆಯಿಂದ ಬೆಳೆ, ಮನೆಗಳಿಗೆ ಹಾನಿ

ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ…

3 hours ago