ಮೈಸೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ಸಾಲದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕೋರ್ಟ್ ತನಿಖೆ ನಡೆಸಲು ಆದೇಶ ನೀಡಿದೆ. ಸಿದ್ದರಾಮಯ್ಯರನ್ನು ಕೆಲ ಜನರು ರಾಜಕೀಯವಾಗಿ ಹೋರಾಟ ಮಾಡಿ ಎಂದು ಪ್ರಚೋದನೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪದೇ ಪದೇ ನಾನು ಯಾವುದೇ ತಪ್ಪು ಮಾಡಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಹೇಳುತ್ತಿದ್ದಾರೆ. ಮುಡಾ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಸಿದ್ದರಾಮಯ್ಯ ಮೊದಲು ರಾಜೀನಾಮೆ ನೀಡಲಿ. ಆ ಬಳಿಕ ಅವರನ್ನು ತಪ್ಪಿತಸ್ಥರೆಂದು ಬಂಧಿಸಲಿ ಎಂದು ಆಗ್ರಹಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಕುಟುಂಬದ ಮೇಲೆ ಹಲ್ಲೆ ಆಗುವ ಸಾಧ್ಯತೆಯಿದೆ ಎಂದು ಗಂಭೀರ ಆರೋಪ ಮಾಡಿ, ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…
ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…