ಮೈಸೂರು: ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ತನಕ ನಮ್ಮ ಹೋರಾಟ ನಿಲ್ಲಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮನ್ನು ಆಯ್ಕೆ ಮಾಡೋದು, ಅಧಿಕಾರದಿಂದ ಕೆಳಗೆ ಇಳಿಸೋದು ಜನರ ಅಧಿಕಾರ. ನಾವು ಪ್ರಜಾಪ್ರಭುತ್ವದ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಪಕ್ಷಕ್ಕೆ ಜನ ಬಹುಮತ ಕೊಟ್ಟಿದ್ದಾರೆ ಎಂದರು.
ಇನ್ನು ಮೊದಲಿನಿಂದಲೂ ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಾ ಬಂದಿದ್ದಾರೆ. ಸುಳ್ಳು ಆರೋಪಗಳನ್ನು ಮಾಡಿ ಜನರಲ್ಲಿ ಅಪನಂಬಿಕೆ ಸೃಷ್ಟಿ ಮಾಡಲು ಬಿಜೆಪಿ ಹಾಗೂ ಜೆಡಿಎಸ್‌ನವರು ಹೊರಟಿದ್ದಾರೆ ಎಂದು ಟಾಂಗ್ ಕೊಟ್ಟರು.
ಇನ್ನು ನಾಳೆ ನಡೆಯುವ ಸಮಾವೇಶದ ಬಗ್ಗೆ ಮಾತನಾಡಿದ ಅವರು, ನಾಳಿನ ಸಮಾವೇಶಕ್ಕೆ ಹೆಚ್ಚಿನ ಜನ ಸೇರಿಸುವ ಪ್ರಯತ್ನ ಮಾಡಿದ್ದೇವೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆಯಿದೆ ಎಂದರು.
ನಾಳೆ ನಡೆಯುವ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಸರ್ಕಾರದಲ್ಲಿ ಆಗಿದ್ದ ಹಗರಣಗಳನ್ನೆಲ್ಲಾ ಎಳೆ ಎಳೆಯಾಗಿ ಬಿಚ್ಚಿಡುತ್ತಾರೆ. ಆ ಎಲ್ಲಾ ಹಗರಣಗಳಿಗೂ ಪ್ರತಿಪಕ್ಷ ಬಿಜೆಪಿ ಉತ್ತರ ಕೊಡಲಿ ಎಂದು ಸವಾಲು ಹಾಕಿದರು.





