Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮೂರು ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 11, 12 ಮತ್ತು 13 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಅಕ್ಟೋಬರ್ 11 ರಂದು ಬೆಳಿಗ್ಗೆ 10.25 ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ.

ಅಕ್ಟೋಬರ್ 12 ರಂದು ಬೆಳಿಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡುವರು.

ಅಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯವರೆಗೆ ಅರಮನೆ ಆವರಣದ ಬಲರಾಮ ದ್ವಾರದಲ್ಲಿ ಆವರಣದಲ್ಲಿ ಆಯೋಜಿಸಲಾಗಿರುವ ನಂದಿಧ್ವಜ ಪೂಜೆಯಲ್ಲಿ ಪಾಲ್ಗೊಂಡು ಸಂಜೆ 4 ಗಂಟೆಯಿoದ 4.30 ಗಂಟೆಯವರೆಗೆ ಅರಮನೆ ಒಳಾವರಣದಲ್ಲಿ ಏರ್ಪಡಿಸಲಾಗಿರುವ ವಿಜಯದಶಮಿ ಮೆರವಣಿಗೆ ಉದ್ಘಾಟನೆ ಮಾಡಲಿದ್ದಾರೆ. ರಾತ್ರಿ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಆಯೋಜಿಸಿರುವ ಪಂಜಿನ ಕವಾಯತು( ಟಾರ್ಚ್ ಲೈಟ್ ಪರೇಡ್) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಕ್ಟೋಬರ್ 13 ರಂದು ಬೆಳಿಗ್ಗೆ 11 ಕ್ಕೆ ಕಡಕೋಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬೆಳಿಗ್ಗೆ 11.30 ಗಂಟೆಗೆ ಮೈಸೂರಿನಿಂದ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Tags: