ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 11, 12 ಮತ್ತು 13 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಅಕ್ಟೋಬರ್ 11 ರಂದು ಬೆಳಿಗ್ಗೆ 10.25 ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ.
ಅಕ್ಟೋಬರ್ 12 ರಂದು ಬೆಳಿಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡುವರು.
ಅಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯವರೆಗೆ ಅರಮನೆ ಆವರಣದ ಬಲರಾಮ ದ್ವಾರದಲ್ಲಿ ಆವರಣದಲ್ಲಿ ಆಯೋಜಿಸಲಾಗಿರುವ ನಂದಿಧ್ವಜ ಪೂಜೆಯಲ್ಲಿ ಪಾಲ್ಗೊಂಡು ಸಂಜೆ 4 ಗಂಟೆಯಿoದ 4.30 ಗಂಟೆಯವರೆಗೆ ಅರಮನೆ ಒಳಾವರಣದಲ್ಲಿ ಏರ್ಪಡಿಸಲಾಗಿರುವ ವಿಜಯದಶಮಿ ಮೆರವಣಿಗೆ ಉದ್ಘಾಟನೆ ಮಾಡಲಿದ್ದಾರೆ. ರಾತ್ರಿ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಆಯೋಜಿಸಿರುವ ಪಂಜಿನ ಕವಾಯತು( ಟಾರ್ಚ್ ಲೈಟ್ ಪರೇಡ್) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಕ್ಟೋಬರ್ 13 ರಂದು ಬೆಳಿಗ್ಗೆ 11 ಕ್ಕೆ ಕಡಕೋಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬೆಳಿಗ್ಗೆ 11.30 ಗಂಟೆಗೆ ಮೈಸೂರಿನಿಂದ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…