Mysore
23
overcast clouds

Social Media

ಭಾನುವಾರ, 29 ಮಾರ್ಚ್ 2026
Light
Dark

ತವರಿನಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಸಿಎಂ ಸಿದ್ದರಾಮಯ್ಯ: ಜುಲೈ.19ರಂದು ಬೃಹತ್‌ ಸಮಾವೇಶ

cm siddaramaiah

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಜುಲೈ.19ರಂದು ಶಕ್ತಿ ಪ್ರದರ್ಶನ ನಡೆಸಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ನಡೆಯುತ್ತಿದೆ.

ಮೈಸೂರು ಜಿಲ್ಲೆಯಲ್ಲಿ ಸಾಧನಾ ಸಮಾವೇಶದ ಹೆಸರಿನಲ್ಲಿ ಜುಲೈ.19ರಂದು ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಮೂರು ದಿನ ಮುಂಚೆಯೇ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಲಿದ್ದು, ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಸಮಾವೇಶದ ಸಂಪೂರ್ಣ ಜವಾಬ್ದಾರಿಯನ್ನು ಆಪ್ತ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೋಡಿಕೊಳ್ಳಲಿದ್ದಾರೆ.

ಈಗಾಗಲೇ ಮೈಸೂರು, ಚಾಮರಾಜನಗರ ಜಿಲ್ಲೆಯ ಶಾಸಕರ ಸಭೆ ನಡೆಸಿ ಹೆಚ್ಚಿನ ಜನರನ್ನು ಕರೆತರಲು ಪ್ಲಾನ್‌ ಮಾಡಿದ್ದು, ಒಂದು ಲಕ್ಷಕ್ಕೂ ಹೆಚ್ಚಿನ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡಲು ಸಿದ್ಧತೆ ನಡೆಯುತ್ತಿದೆ.

Tags:
error: Content is protected !!