ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 21 ಮತ್ತು 22 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ನವೆಂಬರ್ 21 ರಂದು ಸಂಜೆ 6:30 ಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ.
ನವೆಂಬರ್ 22 ರಂದು ಬೆಳಗ್ಗೆ 11 ಗಂಟೆಗೆ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ (ರಿ), ತುಮಕೂರು ಅವರ ವತಿಯಿಂದ ಮೈಸೂರು-ಬೆಂಗಳೂರು ರಸ್ತೆಯಲ್ಲಿನ ಸುಭಾಷ್ ನಗರ ನಂ. 3 ರಲ್ಲಿ ಆಯೋಜಿಸಲಾಗಿರುವ ನೂತನ ಶಾಲೆ “ಕ್ವೆಸ್ಟ್ ಅಕಾಡೆಮಿ”ಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಮದ್ಯಾಹ್ನ 12 ಗಂಟೆಗೆ ಮೈಸೂರು ತಾಲ್ಲೂಕಿನ ವರುಣಾ- ತಿ.ನರಸೀಪುರ ರಸ್ತೆಯ ವರುಣಾ ಕೆರೆ ಮುಂಬಾಗ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮದ್ಯಾಹ್ನ 12:30 ಗಂಟೆಗೆ ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನ ಛತ್ರ ಹೋಬಳಿಯ ವರುಣಾ-ಸುತ್ತೂರು ರಸ್ತೆಯಲ್ಲಿರುವ ಮರಡಿಹುಂಡಿ ಗೇಟ್ ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಂಜೆ 6 ಗಂಟೆಗೆ ಸಂತ ಶ್ರೀ ಕನಕದಾಸರ ಜಯಂತೋತ್ಸವ ಸಮಿತಿ (ರಿ.) ಶ್ರೀ ಕಾಗಿನೆಲೆ ಕನಕ ಗುರುಪೀಠ ಶಾಖಾಮಠ ಅವರ ವತಿಯಿಂದ ಸಿದ್ಧಾರ್ಥ ನಗರದಲ್ಲಿರುವ ಕನಕ ಭವನದಲ್ಲಿ ಆಯೋಜಿಸಲಾಗಿರುವ 2022-23 ಮತ್ತು 2023-24ನೇ ಸಾಲಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…
ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…
ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…