Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

Training program for KAS Taluk Nodal Officers inaugurated by siddaramaiah

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ಮಧ್ಯಾಹ್ನ 12ಕ್ಕೆ ನಗರದ ಕಲಾಮಂದಿರದಲ್ಲಿ ಬಸವ ಜಯಂತಿ ಉದ್ಘಾಟನೆ ಹಾಗೂ 2026ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಮಧ್ಯಾಹ್ನ 3ಕ್ಕೆ ಹುಣಸೂರಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ, ಅಲ್ಲಿನ ಕನಕ ಭವನದಲ್ಲಿ ಹಮ್ಮಿಕೊಂಡಿರುವ ಗಣಪತಿ ದೇವಸ್ಥಾನದ ಉದ್ಘಾಟನೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಏಪ್ರಿಲ್.‌21ರಂದು ಹೆಲಿಕಾಪ್ಟರ್‌ನಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ನಡೆಯುವ 110 ಕೆರೆ -ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

 

Tags:
error: Content is protected !!