ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಶ್ರೀಗಳ ಜೊತೆ ಮಾತುಕತೆ ನಡೆಸಿದರು.
ಇಂದು ಬೆಳಿಗ್ಗೆ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಜೊತೆ ಮಾತುಕತೆ ನಡೆಸಿದರು.
ಬಳಿಕ ಸಿಎಂ ಸಿದ್ದರಾಮಯ್ಯ ಅವರು ಬೆಳಗಿನ ಉಪಹಾರ ಸೇವಿಸಿ ಖುಷಿಪಟ್ಟರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ವೆಂಕಟೇಶ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.





