ಮೈಸೂರು ನಗರ

ಪೊಲೀಸ್ ಅಧಿಕಾರಿ ಸ್ವಯಂ ನಿವೃತ್ತಿ ವಿಚಾರ: ಸಿಎಂ ವರ್ತನೆ ವಿರುದ್ಧ ಯದುವೀರ್‌ ಒಡೆಯರ್‌ ಕಿಡಿ

ಮೈಸೂರು: ಪೊಲೀಸ್‌ ಅಧಿಕಾರಿಯ ಬಳಿ ಸಿಎಂ ಸಿದ್ದರಾಮಯ್ಯ ನಡೆದುಕೊಂಡ ರೀತಿ ಸರಿಯಾಗಿಲ್ಲ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಸಮಾಧಾನ ಹೊರಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಬೈದ ಕಾರಣ ಪೊಲೀಸ್‌ ಅಧಿಕಾರಿ ಸ್ವಯಂ ನಿವೃತ್ತಿ ಘೋಷಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪೊಲೀಸ್‌ ಅಧಿಕಾರಿ ಮಾನಸಿಕವಾಗಿ ಕುಗ್ಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಅಧಿಕಾರಿಗಳು ತಪ್ಪು ಮಾಡಿದ್ದರೆ, ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿ. ಈ ರೀತಿ ಬಹಿರಂಗವಾಗಿ ಅಧಿಕಾರಿಗೆ ಅವಮಾನ ಮಾಡುವುದು ಸರಿಯಲ್ಲ. ಇದು ನಮ್ಮ ರಾಜ್ಯದಲ್ಲಿ ಮಾತ್ರ ಅಲ್ಲ ಎಲ್ಲೂ ಆಗಬಾರದು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಸ್ಪರ ಗೌರವ ಕೊಟ್ಟು ಕೆಲಸ ಮಾಡಬೇಕು.

ಸಿಎಂ ಸಿದ್ದರಾಮಯ್ಯ ನಡೆದುಕೊಂಡು ರೀತಿಯನ್ನು ಎಲ್ಲರೂ ಮಾಧ್ಯಮಗಳಲ್ಲಿ ನೋಡಿದ್ದಾರೆ. ಸಿಎಂ ಸಿದ್ದರಾಮಯ್ಯ ವರ್ತನೆ ಸರಿ ಇರಲಿಲ್ಲ. ಅಧಿಕಾರಿಗಳು ಜನಪ್ರತಿನಿಧಿಗಳ ಆದೇಶ ಪಾಲಿಸಬೇಕು. ಒಂದು ವೇಳೆ ಪಾಲಿಸದಿದ್ದರೆ ಅದನನು ಕೇಳಲು ಸಾಕಷ್ಟು ಮಾರ್ಗಗಳಿವೆ. ಅದನ್ನ ಬಿಟ್ಟು ಈ ರೀತಿ ನಿಂದಿಸಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಕ್ಷದ ಆಂತರಿಕ ವಿಚಾರವನ್ನು ಬಹಿರಂಗವಾಗಿ ಮಾತನಾಡುವುದಿಲ್ಲ ಎಂದರು.

ಇನ್ನು ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಆಂತರಿಕ‌ ವಿಚಾರದ ಬಗ್ಗೆ ಮಾಹಿತಿ ಇಲ್ಲ. ರಾಜ್ಯ ಸರ್ಕಾರ ಆಂತರಿಕ ಕಚ್ಚಾಟದಿಂದ ಆಡಳಿತ ಯಂತ್ರ ಕುಸಿದಿದೆ. ಪ್ರಾಣಿಗಳ ಸಾವು, ಚಾಮುಂಡಿ ಬೆಟ್ಟದ ನಿರ್ವಹಣೆ ಸೇರಿ ಎಲ್ಲಾ ವಲಯದಲ್ಲಿ ವಿಫಲವಾಗಿದೆ. ಇದೆಲ್ಲಾ ಬಿಟ್ಟು ಸರ್ಕಾರ ಉತ್ತಮ ಆಡಳಿತ ನೀಡುವತ್ತ ಗಮನ ಹರಿಸಬೇಕು ಎಂದರು.

ಇನ್ನು ಚಾಮರಾಜನಗರದಲ್ಲಿ ಹುಲಿಗಳು ಹಾಗೂ ಕೋತಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಸಂಬಂಧ ಚಾಮರಾಜನಗರದ ಯಾವುದೇ ಜನಪ್ರತಿನಿಧಿಗಳು ಧ್ವನಿ ಎತ್ತುತ್ತಿಲ್ಲ. ಇದೊಂದು ಗಂಭೀರ ಸಮಸ್ಯೆ ಆಗಿದೆ. ಯಾಕೆ ಅವರಿಗೆ ಅರ್ಥ ಆಗುತ್ತಿಲ್ಲ ಎಂಬುದೇ ಗೊತ್ತಾಗುತ್ತಿಲ್ಲ. ಈ ವಿಚಾರದಲ್ಲಿ ನಾನು ಮಾತ್ರವೇ ಧ್ವನಿ ಎತ್ತುವ ಕೆಲಸ ಆಗುತ್ತಿದೆ. ಅರಣ್ಯ ರಾತ್ರಿ ಸಂಚಾರದ ಬಗ್ಗೆ ಕೂಡ ಸದನದಲ್ಲಿ ನಾನೊಬ್ಬನೇ ದನಿ ಎತ್ತುತ್ತಿದ್ದೇನೆ. ಚಾಮರಾಜನಗರ ಜನಪ್ರತಿನಿಧಿಗಳು ಇನ್ನಾದರೂ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರಕರಣ ಸಂಬಂಧ ಅರಣ್ಯ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಆಗಬೇಕು. ಅರಣ್ಯ ಅಧಿಕಾರಿಗಳು ಸಭೆ ಕರೆದಾಗಲೂ ಯಾರೂ ಬರುವುದಿಲ್ಲ. ಅರಣ್ಯದ ಬಗ್ಗೆ ನಮಗೆ ಏನೂ ಗೊತ್ತಿಲ್ಲ ಎಂದುಕೊಂಡಿದ್ದಾರೆ. ಆದರೆ ನಮಗೆ ಎಲ್ಲ ಗೊತ್ತಿದೆ. ಚಾಮರಾಜನಗರ ಶೇಕಡಾ 50ಕ್ಕೂ ಹೆಚ್ಚು ಅರಣ್ಯ ಹೊಂದಿದೆ. ಅದನ್ನ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ದರ್ಶನ್‌ ಪತ್ನಿ ವಿರುದ್ಧ ಅಶ್ಲೀಲ ಕಮೆಂಟ್‌ ಪ್ರಕರಣ: 6 ಮಂದಿ ವಿರುದ್ಧ ಚಾರ್ಜ್‌ಶೀಟ್‌

ಬೆಂಗಳೂರು: ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್‌ ಪ್ರಕರಣದ ತನಿಖೆ ಕೊನೆಯ ಹಂತಕ್ಕೆ ಬಂದು…

18 mins ago

ರಾಜ್ಯ ಸರ್ಕಾರ ವೇಣುಗೋಪಾಲ್‌ ಕಿವಿ ಹಿಂಡಬೇಕು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕೇರಳ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮೊದಲ ಭಾಷೆಯಾಗಿ ಮಲೆಯಾಳಂ ಕಡ್ಡಾಯ ಕಲಿಕೆ ಮಸೂದೆ ಜಾರಿಗೆ ಮುಂದಾಗಿರುವ ವಿಚಾರಕ್ಕೆ…

40 mins ago

ಶೀತದಲೆ ಹಿನ್ನೆಲೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶೀತದಲೆ…

1 hour ago

‘ಸಾವಿನ ನಂತರವೂ ಜನಮಾನಸದಲ್ಲಿ ಉಳಿದ ವೀರಭದ್ರಪ್ಪ’

ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ  ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು…

5 hours ago

ಓದುಗರ ಪತ್ರ: ಮಹಿಳೆ ವಿವಸ ಪ್ರಕರಣ ತನಿಖೆಯಲ್ಲಿ ಪೂರ್ವಗ್ರಹ ಬೇಡ

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ ಪ್ರಕರಣ ಅತ್ಯಂತ ಅಮಾನವೀಯವಾದುದು. ಸಂತ್ರಸ್ತ ಮಹಿಳೆ ಬಿಜೆಪಿಯೋ, ಕಾಂಗ್ರೆಸ್ಸೋ ಎನ್ನುವುದು ನಂತರದ ವಿಚಾರ. ಮೊದಲಿಗೆ…

5 hours ago

ಓದುಗರ ಪತ್ರ: ಶಾಲೆ ಬಳಿಯೇ ಕಸದ ಗುಡ್ಡೆ!

ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ…

5 hours ago