ಮೈಸೂರು ನಗರ

ಸಿಎಂ ಸಿದ್ದರಾಮಯ್ಯ ಭವಿಷ್ಯ, ಅದೃಷ್ಟ ಗಟ್ಟಿಯಾಗಿದೆ: ಜಿ.ಟಿ.ದೇವೇಗೌಡ

ಮೈಸೂರು: ಸಿದ್ದರಾಮಯ್ಯರಂತಹ ಅದೃಷ್ಟ ರಾಜಕಾರಣಿ ಇನ್ನೊಬ್ಬರಿಲ್ಲ. ಅವರ ರಾಜಕೀಯ ಭವಿಷ್ಯ, ಅದೃಷ್ಟ ತುಂಬಾ ಗಟ್ಟಿಯಾಗಿದೆ ಎಂದು ಸಿದ್ದರಾಮಯ್ಯ ಪರ ಮತ್ತೆ ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡ ಬ್ಯಾಟ್‌ ಬೀಸಿದ್ದಾರೆ.

ನಗರದಲ್ಲಿ ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಫ್‌ಐಆರ್‌ ಅದ ತಕ್ಷಣ ವಿರೋಧ ಪಕ್ಷದವರು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದರು. ಈಗ ನೋಡಿ ಲೋಕಾಯುಕ್ತದಿಂದ ಕ್ಲೀನ್‌ಚಿಟ್‌ ಸಿಕ್ಕಿದೆ. ಎಫ್‌ಐಆರ್‌ ಅದ ತಕ್ಷಣ ರಾಜೀನಾಮೆ ಕೇಲುವುದು ತಪ್ಪು ಎಂದು ಹೇಳಿದೆ. ಈಗ ಸತ್ಯ ಗೊತ್ತಾಗಿರಬಹುದು ಎಂದು ಹೇಳಿದರು.

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಮ್ಮ ಅವರ ಪಾತ್ರದ ಬಗ್ಗೆ ಪ್ರತಿಕ್ರಿಯಿಸಿ, ಪಾರ್ವತಮ್ಮ ಅವರು ಯಾವತ್ತೂ ಸಾರ್ವಜನಿಕವಾಗಿ ಕಾಣಿಸಿಕೊಂಡವರಲ್ಲ, ವ್ಯವಹಾರ ಮಾಡಿದವರೂ ಅಲ್ಲ. ಅವರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.

ಮುಂದುವರಿದು ಮಾತನಾಡುತ್ತಾ, ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಉತ್ತಮವಾಗಿ ಕೆಲಸ ಮಾಡಿದೆ. ಲೋಕಾಯುಕ್ತರ ಮೇಲೆ ಯಾರು ಪ್ರಭಾವ ಬೀರುವುದಕ್ಕೆ ಆಗುವುದಿಲ್ಲ ಎಂದು ಹೇಳಿದರು.

ಇನ್ನು ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುವುದರ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಡಿಕೆ ಶಿವಕುಮಾರ್‌ ಅವರು ಒಂದಲ್ಲ ಒಂದು ದಿನ ಮುಖ್ಯಮಂತ್ರಿ ಆಗುತ್ತಾರೆ. ಅದರೆ, ಅದು ಯಾವಾಗ ಅಂತ ಗೊತ್ತಿಲ್ಲ. ಡಿಕೆ ಶಿವಕುಮಾರ್‌ ಸಿಎಂ ಆಗಬೇಕು ಅಂದರೆ ಸಿದ್ದರಾಮಯ್ಯ ಅವರ ಬೆಂಬಲ ಬೇಕು. 10 ಶಾಸಕರನ್ನು ಇಟ್ಟುಕೊಂಡು ಯಾರು ಸಿಎಂ ಆಗಲು ಸಾಧ್ಯವಿಲ್ಲ ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

3 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

4 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

4 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

5 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

5 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

6 hours ago