ಮೈಸೂರು: ನಾಲ್ಕನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿಂದು ನಾಡ ಅಧಿವೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಪತ್ನಿ ಹಾಗೂ ಸೊಸೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪುನೀತರಾದರು.
ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಸೊಸೆ ಸ್ಮಿತಾ ರಾಕೇಶ್ ಅವರು ಒಟ್ಟಿಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ದೇವಸ್ಥಾನದ ಹಿಂಬಾಗಿಲಿನಿಂದ ಪ್ರವೇಶ ಪಡದು ತಾಯಿ ಚಾಮುಂಡಿಯ ದರ್ಶನ ಪಡೆದಿದ್ದಾರೆ. ಬಳಿಕ ಅದೇ ದಾರಿಯಲ್ಲಿ ನಿರ್ಗಮಿಸಿದ್ದಾರೆ. ಸಿಎಂ ಪತ್ನಿ ಹಾಗೂ ಸೊಸೆಗೆ ಪೊಲೀಸರು ಎಸ್ಕಾರ್ಟ್ ಮೂಲಕ ದೇವಸ್ಥಾನಕ್ಕೆ ಕರೆದುಕೊಂಡು ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.





