ನವದೆಹಲಿ: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲು ಆಗಲ್ಲ. ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಯಾಗಲಿ. ತನಿಖೆ ಆಗುವವರೆಗೂ ಅವರು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅಪರಾಧಿ ಎಂದು ಮತ್ತೊಮ್ಮೆ ಸಾಬೀತಾಗಿದೆ. ಹೈಕೋರ್ಟ್ ಆದೇಶ ಸರಿಯಾಗಿಯೇ ಎಂದು ಕೋರ್ಟ್ ಆದೇಶವನ್ನು ಸ್ವಾಗತ ಮಾಡಿದರು.
ಈ ಹಿಂದೆ ಭ್ರಷ್ಟಾಚಾರದ ಪಿತಾಮಹ ಸಿದ್ದರಾಮಯ್ಯ ಲೋಕಾಯುಕ್ತವನ್ನು ಮುಚ್ಚಿದ್ದರು. ಈಗ ಅದರಿಂದಲೇ ರಕ್ಷಣೆ ಪಡೆಯುತ್ತಾರೆ. ತಮ್ಮ ಮೇಲಿನ ಕೇಸ್ ಮುಚ್ಚಿ ಹಾಕಲು ಲೋಕಾಯುಕ್ತವನ್ನೇ ಮುಚ್ಚಿದ್ದರು ಎಂದು ಗಂಭೀರ ಆರೋಪ ಮಾಡಿದರು.