ಮೈಸೂರು ನಗರ

ಕೋ- ಆಪರೇಟಿವ್ ಬ್ಯಾಂಕ್‌ ಗಳು ಪಾರದರ್ಶಕ ಮತ್ತು ಗ್ರಾಹಕ ಸ್ನೇಹಿಯಾಗಿರಲಿ – ಎಂ.ಕೆ.ಸೋಮಶೇಖರ್

 

ಮೈಸೂರು: ಇತ್ತೀಚೆಗೆ ಕೊ-ಆಪರೇಟಿವ್ ಬ್ಯಾಂಕ್ ಗಳು ಹೆಚ್ಚು ಹೆಚ್ಚು ಪ್ರಾರಂಭವಾಗುತ್ತಿವೆ. ಆದರೆ ಅದರ ಆಶಯಗಳನ್ನು ಈಡೇರಿಸುವತ್ತ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ವಿಫಲವಾಗುತ್ತಿವೆ ಎಂದು ಮಾಜಿ ಶಾಸಕ ಎಂ.ಕೆ ಸೋಮಶೇಖರ್‌ ಅಭಿಪ್ರಾಯಪಟ್ಟರು.

ನಗರದ ವಿದ್ಯಾರಣ್ಯಪುರಂನಲ್ಲಿ ಪ್ರಗತಿ ಕೋ-ಆಪರೇಟಿವ್ ಬ್ಯಾಂಕ್ ನ ನೂತನ ಫ್ರಾಂಚೈಸಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಸಂಘಗಳ ನೀತಿ ನಿಯಮಗಳನ್ನು ಚೆನ್ನಾಗಿ ತಿಳಿದುಕೊಂಡು ಪಾರದರ್ಶಕತೆ ಮತ್ತು ಗ್ರಾಹಕ ಸ್ನೇಹಿಯಾಗಿ ಕೆಲಸ ನಿರ್ವಹಿಸಿದರೆ ಹೆಚ್ಚು ಷೇರುದಾರರು ಹಾಗೂ ಸದಸ್ಯರುಗಳನ್ನು ಆಕರ್ಷಿಸಬಹುದು. ಈ ನಿಟ್ಟಿನಲ್ಲಿ ಕೋ-ಆಪರೇಟಿವ್‌ ಬ್ಯಾಂಕ್‌ಗಳು ಪಾರದರ್ಶಕ ಮತ್ತು ಗ್ರಾಹಕ ಸ್ನೇಹಿಯಾಗಿರಲಿ ಎಂದರು.

ಸಹಕಾರ ಸಂಘಗಳಿಗೆ ಸದಸ್ಯರು ಹೆಚ್ಚಾದಂತೆ ಬ್ಯಾಂಕಿನ ಆದಾಯ ಸಹ ಹೆಚ್ಚಾಗುತ್ತದೆ. ಇದರಿಂದ ಗ್ರಾಹಕರಿಗೆ ಹೆಚ್ಚು ಸಾಲವನ್ನು ನೀಡಬಹುದು. ಆರ್ಥಿಕ ಚಟುವಟಿಕೆಗಳು ಹೆಚ್ಚಾಗಿ ನೆಡೆಯಲು ಅವಕಾಶ ಸೃಷ್ಟಿಯಾಗುತ್ತದೆ ಎಂದು ಹೇಳಿದರು.

ಆಡಳಿತ ಮಂಡಳಿಯವರು ಸಹ ಪಾರದರ್ಶಕತೆಯಿಂದ ಇದ್ದರೆ ಬ್ಯಾಂಕ್ ಸಹ ಬೆಳೆಯುತ್ತದೆ. ಗ್ರಾಹಕರಿಗೂ ಹೆಚ್ಚು ಅನುಕೂಲಗಳು ಸಿಗುತ್ತದೆ. ಪ್ರಗತಿ ಕೊ-ಆಪರೇಟಿವ್ ಬ್ಯಾಂಕ್ ಸಹ ಎತ್ತರಕ್ಕೆ ಬೆಳೆಯಲಿ ಹೆಚ್ಚು ಹೆಚ್ಚು ಉಪಶಾಖೆಗಳನ್ನು ತೆರೆದು ವಿಸ್ತಾರವಾಗಿ ಬೆಳೆದು ಸಮಾಜಕ್ಕೆ ಉತ್ತಮ ಸೇವೆ ನೀಡಲಿ ಎಂದು ಇದೇ ವೇಳೆ ಶುಭಕೋರಿದರು.

ಈ ಸಂಧರ್ಭದಲ್ಲಿ ಪ್ರಗತಿ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ರವಿಕುಮಾರ್, ಉಪಾಧ್ಯಕ್ಷರಾದ ಕೃಷ್ಣಕುಮಾರ್, ನಿರ್ದೇಶಕಿಯವರಾದ ತೇಜಾವತಿ, ನಿಕಟಪೂರ್ವ ಅಧ್ಯಕ್ಷರಾದ ಮಂಜುನಾಥ್(ಪ್ರಮಥಿ), ಮೈಸೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಲೋಕೇಶ್, ಕೃಷ್ಣರಾಜೇಂದ್ರ ಬ್ಯಾಂಕ್ ಅಧ್ಯಕ್ಷರಾದ ಪ್ರತಿಧ್ವನಿ ಪ್ರಸಾದ್, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷರಾದ ರಮೇಶ್ ರಾವ್, ಮಾಜಿ ಪಾಲಿಕೆ ಸದಸ್ಯರುಗಳಾದ ಎಂ.ಸುನೀಲ್, ಶೋಭಾ ಸುನೀಲ್, ಮುಖಂಡರುಗಳಾದ ರವಿಶಂಕರ್, ಶಂಕರ್, ಯುವ ಮುಖಂಡರಾದ ರಾಕೇಶ್, ವಕೀಲರಾದ ಅಶ್ವಿನಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

11 mins ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

24 mins ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

27 mins ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

32 mins ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

39 mins ago

ಓದುಗರ ಪತ್ರ | ಮತದಾನ ಪದ್ಧತಿಯಲ್ಲೂ ಮಾರ್ಪಾಡಾಗಲಿ

ತಂತ್ರಜ್ಞಾನ, ಬಾಹ್ಯಾಕಾಶ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ (ಎಐ) ನಾವು ಅಗಾಧ ಸಾಧನೆ ಮಾಡಿದ್ದೇವೆ. ಹಾಗಾಗಿ ಇವತ್ತು ಜಗತ್ತು ಭಾರತದತ್ತ ತಿರುಗಿ…

43 mins ago