Committed to bilingual formula in the state: CM Siddaramaiah clarifies
ಮೈಸೂರು: ರಾಜ್ಯದಲ್ಲಿ ದ್ವಿಭಾಷಾ ಸೂತ್ರವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾವು ದ್ವಿಭಾಷ ಸೂತ್ರ ಒಪ್ಪಿಕೊಳ್ಳುತ್ತೇವೆ ಎಂದು ಪುನರುಚ್ಚರಿಸಿದರು.
ರಾಜ್ಯದಿಂದ ತಮಿಳುನಾಡಿಗೆ ನೀರು ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 2023-24ರಲ್ಲಿ ಟ್ರಿಬುನಲ್ ಆದೇಶದ ಪ್ರಕಾರ 177.15 ಟಿಎಂಸಿ ನೀರು ಬಿಡುತ್ತಿದ್ದೆವು. ಈ ಬಾರಿ ಹೆಚ್ಚುವರಿಯಾಗಿ 9 ಟಿಎಂಸಿ ನೀರು ಬಿಡಬೇಕಿತ್ತು. ಆದರೆ 22 ಟಿಎಂಸಿ ನೀರನ್ನು ಬಿಟ್ಟಿದ್ದೇವೆ. ಟ್ರಿಬುನಲ್ ನಿಯಮದ ಪ್ರಕಾರ ಪ್ರತಿ ವರ್ಷ ಜಾಸ್ತಿ ಕೊಟ್ಟಿದ್ದೇವೆ. ಆದರೆ ಒಂದೆರಡು ವರ್ಷಗಳು ಮಾತ್ರ ಕಡಿಮೆ ನೀರು ಕೊಟ್ಟಿದ್ದೇವೆ. 177.5 ಟಿಎಂಸಿ ನೀರು ಕೊಡಲು ನಮ್ಮಲ್ಲೇನು ತಕರಾರು ಇಲ್ಲ. ಆದರೂ ನಮ್ಮ ಕಡೆಯಿಂದ ಹೆಚ್ಚು ನೀರು ಬಿಡಲಾಗುತ್ತಿದೆ. ಸಂಕಷ್ಟದ ಸಮಯದಲ್ಲಿ ನೀರು ಹಂಚಿಕೆಯಾಗಬೇಕು. ಅದನ್ನು ಸರಿದೂಗಿಸಲು ಮೇಕೆದಾಟು ಯೋಜನೆ ಜಾರಿ ಮಾಡಬೇಕಿದ್ದು, ಹೆಚ್ಚುವರಿ ನೀರು ಸಂಗ್ರಹಿಸಲು ಮುಂದಾಗಬೇಕಿದೆ ಎಂದರು.
ಇನ್ನು ಹಾಸನ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಯುವ ಸಮೂಹ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯುವ ಸಮುದಾಯದಲ್ಲಿ ಯಾವ ಕಾರಣಕ್ಕೆ ಹೃದಯಾಘಾತ ಉಂಟಾಗುತ್ತಿದೆ ಎಂದು ಕಾರಣ ಪತ್ತೆ ಹಚ್ಚಬೇಕು. ಬಳಿಕ ಅದಕ್ಕೆ ಪರಿಹಾರ ನೀಡಬೇಕಿದೆ. ಹೃದಯಾಘಾತ ಯಾವ ಕಾರಣಕ್ಕಾಗಿ ಉಂಟಾಗುತ್ತಿದೆ ಎಂದು ಪತ್ತೆ ಹಚ್ಚಿ ಅದಕ್ಕೆ ಸೂಕ್ತ ಪರಿಹಾರ ನೀಡಬೇಕಿದೆ ಎಂದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…