ಮೈಸೂರು : ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ನಾಯಕತ್ವ ಕುರಿತು ನೀಡಿರುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನೀಡಿರುವ ಹೇಳಿಕೆಯಲ್ಲಿ ತಪ್ಪೇನಿಲ್ಲ. ಆದರೆ ನನ್ನ ಹೇಳಿಕೆಯನ್ನು ಬೇರೆ ಬೇರೆ ರೀತಿ ಬಿಂಬಿಸುತ್ತಿದ್ದಾರೆ. ನಾನು ಏನು ಹೇಳಬೇಕೋ ಅದನ್ನು ಹೇಳಿಯಾಗಿದೆ. ಅನಗತ್ಯವಾಗಿ ಮತ್ತೆ ಅದನ್ನೇ ಮಾತನಾಡಿ ವಿವಾದ ಸೃಷ್ಟಿ ಮಾಡುವುದಿಲ್ಲ. ನನ್ನ ಹೇಳಿಕೆ ವಿವಾದ ಪಡೆದ ಕ್ಷಣವೇ ಅದಕ್ಕೆ ಸ್ಪಷ್ಟೀಕರಣ ಕೊಟ್ಟಿದ್ದೇನೆ. ಮಾಧ್ಯಮದ ಮುಂದೆ ಮತ್ತೆ ಏನೂ ಮಾತನಾಡುವುದಿಲ್ಲ. ಈ ವಿಚಾರದ ಬಗ್ಗೆ ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ. ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ಒಳಗೆ ಮಾತನಾಡುತ್ತೇನೆ ಎಂದರು.
ಇದನ್ನೂ ಓದಿ: ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ: ಯತೀಂದ್ರ ಸಿದ್ದರಾಮಯ್ಯ
ಈ ವಿಚಾರವಾಗಿ ಪಕ್ಷದಿಂದ ನೋಟೀಸ್ ಬಂದಾಗ ನೋಡಿಕೊಳ್ಳೋಣ ಬಿಡಿ. ಪಕ್ಷ ನನಗೆ ನೋಟಿಸ್ ಕೊಟ್ಟರೆ ಸೂಕ್ತ ಉತ್ತರ ಕೊಡುತ್ತೇನೆ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಈಗಿನ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ. ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಯಾವುದೂ ಇಲ್ಲ. ಕೇವಲ ಊಹಾಪೋಹ ಅಷ್ಟೇ ಎಂದರು.
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪತ್ತೆಗಾಗಿ ಪೊಲೀಸರು…
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…