ಮೈಸೂರು: ಪಕ್ಷದ ಇಬ್ಬರು ಕಾರ್ಯಕರ್ತರು ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ಜಿಲ್ಲಾಧ್ಯಕ್ಷರಿಗೆ ದೂರು ನೀಡಿದ್ದಾರೆ. ಅದರನ್ವಯ ನಾವು ದೂರನ್ನು ರಾಜ್ಯಾಧ್ಯಕ್ಷರಿಗೆ ರವಾನೆ ಮಾಡಿದ್ದೇವೆ ಎಂದು ಬಿಜೆಪಿ ಮೈಸೂರು ಜಿಲ್ಲಾಧ್ಯಕ್ಷ ಎಲ್.ನಾಗೇಂದ್ರ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರು ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ದೂರು ನೀಡಿದ್ದು, ಈ ಸಂಬಂಧ ಕ್ರಮ ತೆಗೆದುಕೊಳ್ಳುವುದು ರಾಜ್ಯ ನಾಯಕರಿಗೆ ಬಿಟ್ಟಿದ್ದು ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ನಮ್ಮಲ್ಲಿ ಗುಂಪುಗಳಿಲ್ಲ. ಹಸು ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಮೋರ್ಚಾ ಮತ್ತು ಪಕ್ಷದ ವತಿಯಿಂದಲೂ ಮೈಸೂರಿನಲ್ಲಿ ಪ್ರತಿಭಟನೆ ಮಾಡಿದ್ದೇವು. ಆ ಪ್ರತಿಭಟನೆಗೆ ಪ್ರತಾಪ ಸಿಂಹ ಅವರಿಗೂ ಆಹ್ವಾನ ನೀಡಿದ್ದೆವು. ಆದರೆ ಅವರು ಬರಲಿಲ್ಲ ಎಂದರು.
ಮುಂಚೆ ಎಂಪಿ ಆಗಿದ್ದಾಗ ಪ್ರತಾಪ್ ಸಿಂಹ ತುಂಬಾ ಬ್ಯೂಸಿ ಆಗಿದ್ದರು. ಅವರು ಹಸುವಿಗೆ ಪೂಜೆ ಮಾಡಿ ನಂತರ ಗೋ ಮಾತೆ ಕೆಚ್ಚಲು ಕೊಯ್ದ ಪ್ರಕರಣ ಖಂಡಿಸಿ ಪ್ರತಿಭಟನೆ ಮಾಡಿರಬಹುದು. ಇದು ಪಕ್ಷದ ವತಿಯಿಂದ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…