ಮೈಸೂರು: ಉದ್ಯಮಿ ಹಾಗೂ ಟಾಟಾ ಗ್ರೂಪ್‌ನ ಅಧ್ಯಕ್ಷರೂ ಆದ ರತನ್ ಟಾಟಾ ಅವರ ನಿಧನಕ್ಕೆ ನಗರದ ವಿವಿಧ ಸಂಘಟನೆಗಳು ಟಾಟಾ ಅವರ ಭಾವಚಿತ್ರ ಹಿಡಿದು ಮೌನಾಚರಣೆ ಮಾಡಿ ಸಂತಾಪ ಸಲ್ಲಿಸಿದರು.
ನಗರದ ಚಾಮುಂಡಿಪುರಂ ವೃತ್ತದಲ್ಲಿ ಗುರುವಾರ ಅಪೂರ್ವ ಸ್ನೇಹ ಬಳಗ, ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸದಸ್ಯರು ಸಂತಾಪ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮಾಜಿ ನಗರಪಾಲಿಕೆ ಸದಸ್ಯ ಮಾವಿ ರಾಂಪ್ರಸಾದ್, ರತನ್ ಟಾಟಾ ಅವರು ಟಾಟಾ ಸನ್ಸ್ ಮೂಲಕ ಹಲವಾರು ಉದ್ದಿಮೆಗಳನ್ನು ಸ್ಥಾಪಿಸಿ ದೇಶದ ಲಕ್ಷಾಂತರ ಮಂದಿಗೆ ಉದ್ಯೋಗದಾತರಾಗಿ ಭಾರತವನ್ನ ಜಾಗತಿಕ ಮಟ್ಟದಲ್ಲಿ ಟಾಟಾ ಬ್ರಾಂಡ್ ಜನಪ್ರಿಯಗೊಳಿಸಿದರು. ಅವಕಾಶಗಳಿಗಾಗಿ ಕಾಯಬಾರದು ಅವಕಾಶವನ್ನ ಸೃಷ್ಟಿಸಿಕೊಳ್ಳಬೇಕು ಎನ್ನುವ ಮೂಲಕ ಯುವ ಉದ್ಯಮಿಗಳಿಗೆ ಸ್ಪೂರ್ಥಿಯಾಗಿದ್ದಾರೆ, ಸಮಾಜದಲ್ಲಿ ಸಂಪಾದನೆ ಶ್ರೀಮಂತಿಕೆಯ ಜೊತೆ ಹೃದಯ ಶ್ರೀಮಂತಿಕೆ ತೋರಿಸಿಕೊಟ್ಟವರು ರತನ್ ಟಾಟಾ ಎಂದು ಹೇಳಿದರು.
ಮಾಜಿನಗರ ಪಾಲಿಕಾ ಸದಸ್ಯ ಬಿ ವಿ ಮಂಜುನಾಥ್, ಬಿಜೆಪಿ ನಗರ ಉಪಾಧ್ಯಕ್ಷ ಜೋಗಿ ಮಂಜು, ಮೈಸೂರ್ ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಲೋಹಿತ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ನಿರೂಪಕ ಅಜಯ್ ಶಾಸ್ತ್ರಿ, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಸಿ ಎಸ್ ಚಂದ್ರಶೇಖರ್, ಜೆಡಿಎಸ್ ಕಾರ್ಯಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ದೂರ ರಾಜಣ್ಣ, ಕಾಂಗ್ರೆಸ್ ಯುವ ಮುಖಂಡ ಸಂತೋಷ್ ಕಿರಾಳು, ಮಧು ಎನ್ ಪೂಜಾರ್, ಧರ್ಮೇಂದ್ರ, ಮಹಾನ್ ಶ್ರೇಯಸ, ಹಾಗೂ ಇನ್ನಿತರರು ಹಾಜರಿದ್ದರು.
ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು…
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…
ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…
ಬೈರುತ್: ಅಮೇರಿಕಾ-ಇರಾನ್ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 11 ಮಂದಿ…