ಮೈಸೂರು ನಗರ

ರತನ್ ಟಾಟಾ ನಿಧನಕ್ಕೆ ವಿವಿಧ ಸಂಘಟನೆಗಳ ಸಂತಾಪ

ಮೈಸೂರು: ಉದ್ಯಮಿ ಹಾಗೂ ಟಾಟಾ ಗ್ರೂಪ್‌ನ ಅಧ್ಯಕ್ಷರೂ ಆದ ರತನ್‌ ಟಾಟಾ ಅವರ ನಿಧನಕ್ಕೆ ನಗರದ ವಿವಿಧ ಸಂಘಟನೆಗಳು ಟಾಟಾ ಅವರ ಭಾವಚಿತ್ರ ಹಿಡಿದು ಮೌನಾಚರಣೆ ಮಾಡಿ ಸಂತಾಪ ಸಲ್ಲಿಸಿದರು.

ನಗರದ ಚಾಮುಂಡಿಪುರಂ ವೃತ್ತದಲ್ಲಿ ಗುರುವಾರ ಅಪೂರ್ವ ಸ್ನೇಹ ಬಳಗ, ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸದಸ್ಯರು ಸಂತಾಪ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮಾಜಿ ನಗರಪಾಲಿಕೆ ಸದಸ್ಯ ಮಾವಿ ರಾಂಪ್ರಸಾದ್, ರತನ್‌ ಟಾಟಾ ಅವರು ಟಾಟಾ ಸನ್ಸ್ ಮೂಲಕ ಹಲವಾರು ಉದ್ದಿಮೆಗಳನ್ನು ಸ್ಥಾಪಿಸಿ ದೇಶದ ಲಕ್ಷಾಂತರ ಮಂದಿಗೆ ಉದ್ಯೋಗದಾತರಾಗಿ ಭಾರತವನ್ನ ಜಾಗತಿಕ ಮಟ್ಟದಲ್ಲಿ ಟಾಟಾ ಬ್ರಾಂಡ್ ಜನಪ್ರಿಯಗೊಳಿಸಿದರು. ಅವಕಾಶಗಳಿಗಾಗಿ ಕಾಯಬಾರದು ಅವಕಾಶವನ್ನ ಸೃಷ್ಟಿಸಿಕೊಳ್ಳಬೇಕು ಎನ್ನುವ ಮೂಲಕ ಯುವ ಉದ್ಯಮಿಗಳಿಗೆ ಸ್ಪೂರ್ಥಿಯಾಗಿದ್ದಾರೆ, ಸಮಾಜದಲ್ಲಿ ಸಂಪಾದನೆ ಶ್ರೀಮಂತಿಕೆಯ ಜೊತೆ ಹೃದಯ ಶ್ರೀಮಂತಿಕೆ ತೋರಿಸಿಕೊಟ್ಟವರು ರತನ್ ಟಾಟಾ ಎಂದು ಹೇಳಿದರು.

ಮಾಜಿನಗರ ಪಾಲಿಕಾ ಸದಸ್ಯ ಬಿ ವಿ ಮಂಜುನಾಥ್, ಬಿಜೆಪಿ ನಗರ ಉಪಾಧ್ಯಕ್ಷ ಜೋಗಿ ಮಂಜು, ಮೈಸೂರ್ ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಲೋಹಿತ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ನಿರೂಪಕ ಅಜಯ್ ಶಾಸ್ತ್ರಿ, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್  ಮೈಸೂರು ಘಟಕದ ಅಧ್ಯಕ್ಷ ಸಿ ಎಸ್ ಚಂದ್ರಶೇಖರ್, ಜೆಡಿಎಸ್ ಕಾರ್ಯಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ದೂರ ರಾಜಣ್ಣ, ಕಾಂಗ್ರೆಸ್ ಯುವ ಮುಖಂಡ ಸಂತೋಷ್ ಕಿರಾಳು, ಮಧು ಎನ್ ಪೂಜಾರ್, ಧರ್ಮೇಂದ್ರ, ಮಹಾನ್ ಶ್ರೇಯಸ, ಹಾಗೂ ಇನ್ನಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

8 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

10 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago