Mysore
24
overcast clouds

Social Media

ಬುಧವಾರ, 29 ಜುಲೈ 2026
Light
Dark

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ಅವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲಾ ಮಟ್ಟದ ಕೆರೆ ಸಂರಕ್ಷಣಾ ಪಡೆಯ ಸಭೆ ನಡೆಯಿತು. ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳೊಂದಿಗೆ ಕೆರೆ ಸಂರಕ್ಷಣೆಯ ಬಗ್ಗೆ ಚರ್ಚೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಿದರು.

ಎಲ್ಲಾ ಕೆರೆಗಳಿಗೆ ಭೇಟಿ ನೀಡಿ ನೀರಿನ ಶುದ್ಧತೆಯ ಬಗ್ಗೆ ಹಾಗೂ ಅಲ್ಲಿನ ನೈರ್ಮಲ್ಯ ಕಾಪಾಡಿಕೊಳ್ಳುವ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಪರಿಸರ ಸಂರಕ್ಷಣೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

Tags:
error: Content is protected !!