Mysore
18
broken clouds

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಕಾಂಗ್ರೆಸ್ ಸಂಸ್ಕೃತಿಯೇ ಅಂತದ್ದು: ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಕಿಡಿ

ಮೈಸೂರು: ಕುಂಭಮೇಳ ಪುಣ್ಯಸ್ನಾನದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆ ಬಗ್ಗೆ ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್‌ನವರ ಸಂಸ್ಕೃತಿಯೇ ಅಂತದ್ದು. ಅವರಿಗೆ ನಮ್ಮ ಆಚಾರ, ವಿಚಾರಗಳ ಮೇಲೆ ನಂಬಿಕೆ ಇಲ್ಲ ಎಂದು ಕಿಡಿಕಾರಿದರು.

ನಗರದಲ್ಲಿ ಇಂದು (ಜ.29) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಟೀಕೆ ಮಾಡುವುದೇ ಕೆಲಸ. ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮಾಡಿರುವ ಟೀಕೆ, ಪದ ಬಳಕೆ ಸರಿಯಿಲ್ಲ. ಕಾಂಗ್ರೆಸ್‌ಗೆ ನಮ್ಮ ಧಾರ್ಮಿಕ ಆಚರಣೆಗಳ ಮೇಲೆ ನಂಬಿಕೆ ಇಲ್ಲ ಅದಕ್ಕೆ ಈ ರೀತಿ ಮಾತನಾಡುತ್ತಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ನವರು ಬೆಳಗಾವಿಯಲ್ಲಿ ಜೈ ಬಾಪು, ಜೈ ಅಂಬೇಡ್ಕರ್, ಜೈ ಸಂವಿಧಾನ್ ಎಂದು ಕಾರ್ಯಕ್ರಮ ಮಾಡಿದರು. ಗಾಂಧೀಜಿಯವರ ಹೆಸರಿನಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ಮಾಡಿದರು. ಆದರೂ ಈಗ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಗಾಂಧೀಜಿ ಅವರ ಮೇಲೆ ಕಾಂಗ್ರೆಸಿಗರಿಗೆ ನಂಬಿಕೆ ಇದ್ದಿದ್ದರೆ ಇಂತಹ ಮಾತುಗಳು ಬರುತ್ತಿರಲಿಲ್ಲ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್, ಶಾಸಕ ಜಿ.ಡಿ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಕೆ.ಎನ್. ಮಂಜೇಗೌಡ, ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಡಾ.ಅನ್ನದಾನಿ, ಮಾಜಿ ಮೇಯರ್ ರವಿಕುಮಾರ್ ಮುಂತಾದವರು ಸಚಿವರ ಜತೆಯಲ್ಲಿ ಇದ್ದರು.

Tags: