ಮೈಸೂರು: ಕುಂಭಮೇಳ ಪುಣ್ಯಸ್ನಾನದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆ ಬಗ್ಗೆ ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್‌ನವರ ಸಂಸ್ಕೃತಿಯೇ ಅಂತದ್ದು. ಅವರಿಗೆ ನಮ್ಮ ಆಚಾರ, ವಿಚಾರಗಳ ಮೇಲೆ ನಂಬಿಕೆ ಇಲ್ಲ ಎಂದು ಕಿಡಿಕಾರಿದರು.
ನಗರದಲ್ಲಿ ಇಂದು (ಜ.29) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಟೀಕೆ ಮಾಡುವುದೇ ಕೆಲಸ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮಾಡಿರುವ ಟೀಕೆ, ಪದ ಬಳಕೆ ಸರಿಯಿಲ್ಲ. ಕಾಂಗ್ರೆಸ್‌ಗೆ ನಮ್ಮ ಧಾರ್ಮಿಕ ಆಚರಣೆಗಳ ಮೇಲೆ ನಂಬಿಕೆ ಇಲ್ಲ ಅದಕ್ಕೆ ಈ ರೀತಿ ಮಾತನಾಡುತ್ತಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ನವರು ಬೆಳಗಾವಿಯಲ್ಲಿ ಜೈ ಬಾಪು, ಜೈ ಅಂಬೇಡ್ಕರ್, ಜೈ ಸಂವಿಧಾನ್ ಎಂದು ಕಾರ್ಯಕ್ರಮ ಮಾಡಿದರು. ಗಾಂಧೀಜಿಯವರ ಹೆಸರಿನಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ಮಾಡಿದರು. ಆದರೂ ಈಗ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಗಾಂಧೀಜಿ ಅವರ ಮೇಲೆ ಕಾಂಗ್ರೆಸಿಗರಿಗೆ ನಂಬಿಕೆ ಇದ್ದಿದ್ದರೆ ಇಂತಹ ಮಾತುಗಳು ಬರುತ್ತಿರಲಿಲ್ಲ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್, ಶಾಸಕ ಜಿ.ಡಿ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಕೆ.ಎನ್. ಮಂಜೇಗೌಡ, ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಡಾ.ಅನ್ನದಾನಿ, ಮಾಜಿ ಮೇಯರ್ ರವಿಕುಮಾರ್ ಮುಂತಾದವರು ಸಚಿವರ ಜತೆಯಲ್ಲಿ ಇದ್ದರು.
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…